ರಾಯಚೂರು: ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿನ ನ್ಯೂನತೆಗಳನ್ನ ಸರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಅ. 15ರಂದು ಅಂತ್ಯಗೊಳ್ಳಲ್ಲಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸುವುದು, ತೆಗೆದು ಹಾಕುವುದು, ವರ್ಗಾವಣೆ ಹಾಗೂ ನ್ಯೂನತೆಗಳು ಸರಿಪಡಿಸಿಕೊಳ್ಳಲು ಅವಕಾಶವಿದೆ. ಅಲ್ಲದೇ ಮೊಬೈಲ್ನಲ್ಲಿ ಆ್ಯಪ್ ಡೌನ್ಲೌಡ್ ಮಾಡಿಕೊಂಡು ಸಹ ಸರಿಪಡಿಸಿಕೊಳ್ಳಬಹುದಾಗಿದೆ. ಸೆ. 1ರಿಂದಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಜಿಲ್ಲೆಯಲ್ಲಿ 16.22 ಲಕ್ಷ ಮತದಾರರಲ್ಲಿ ಇಲ್ಲಿವರೆಗೆ 3.21 ಲಕ್ಷ ಮತದಾರರ ಪರಿಶೀಲನೆ ಕಾರ್ಯ ಅಂತಿಮಗೊಂಡಿದೆ ಎಂದರು.
ಇನ್ನು ಪರಿಶೀಲನೆ ಬಳಿಕ ಮತದಾರರ ಪಟ್ಟಿಯ ಕರಡು ಪಟ್ಟಿಯನ್ನ ಪ್ರಕಟಿಸಲಾಗುವುದು. ಮತದಾರರ ಸಹಾಯವಾಣಿ 1950ಕ್ಕೆ ಕರೆ ಮಾಡಿ ಸಹ ನ್ಯೂನತೆಯನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಇಲ್ಲವೇ ಸಹಾಯಕ ಆಯುಕ್ತರ ಕಚೇರಿ, ತಹಶೀಲ್ದರ್ ಕಚೇರಿ, ಗ್ರಾಪಂ ಕಚೇರಿಗಳಲ್ಲಿ ಸಹ ಪರಿಷ್ಕರಣೆ ಮಾಡಿಸಿಕೊಳ್ಳಬಹುದಾಗಿದೆ ಎಂದರು.