ETV Bharat / state

ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧ: ಸಿಎಂಗೆ ರಾಯಚೂರು ಡಿಸಿ ವಿವರಣೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧ

ರಾಯಚೂರು ಜಿಲ್ಲೆಯಲ್ಲಿ ಜೂನ್​ನಿಂದ ಇಲ್ಲಿಯವರೆಗೆ ಭಾರೀ ಮಳೆ, ಪ್ರವಾಹದಿಂದ ಒಟ್ಟು 18 ಜನರು ಮೃತಪಟ್ಟಿದ್ದು, ಎಲ್ಲ ಮೃತರ ಕುಟಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ.

D C Venkatesh Kumar
ಸಿಎಂ ಜೊತೆ ವಿಡಿಯೋ ಸಂವಾದ ನಡೆಸಿದ ಡಿಸಿ
author img

By

Published : Oct 16, 2020, 4:58 PM IST

ರಾಯಚೂರು: ಜಿಲ್ಲೆಯಲ್ಲಿ ಮಳೆ, ಪ್ರವಾಹ ಎದುರಿಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿ, ನದಿ ತೀರದಲ್ಲಿ ಯಾರು ಹೋಗದಂತೆ ಸೂಚಿಸಲಾಗಿದೆ. ಇಲ್ಲಿಯವರೆಗೆ ಮಳೆಯಿಂದಾಗಿ 158 ಕೋಟಿ ರೂ. ಹಾನಿ ಆಗಿದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಸಿಎಂ ಜೊತೆ ವಿಡಿಯೋ ಸಂವಾದ ನಡೆಸಿದ ಡಿಸಿ...

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಅತಿವೃಷ್ಟಿ, ಪ್ರವಾಹದಿಂದ ಹಾನಿಯ ಬಗ್ಗೆ ಹಾಗೂ ಕೈಗೊಂಡ ಕ್ರಮಗಳ ಕುರಿತಾಗಿ ವಿಡಿಯೋ ಸಂವಾದದಲ್ಲಿ ಭಾಗಿಯಾಗಿ ಜಿಲ್ಲೆಯ ಸ್ಥಿತಿಗತಿಗಳ ಕುರಿತು ವಿವರಿಸಿದರು.

ಜುರಾಲ್ ಡ್ಯಾಂಗೆ 5.40 ಲಕ್ಷ ಕ್ಯುಸೆಕ್ ನೀರು ಹರಿಸಲಾಗಿದೆ. ತುಂಗಭದ್ರಾ ಡ್ಯಾಂನ್‌ನಲ್ಲಿ 20 ಸಾವಿರ ಕ್ಯುಸೆಕ್ ನೀರು ಹರಿಯುತ್ತಿದ್ದು, ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಕಾರಣ ರಾಯಚೂರು ತಾಲೂಕಿನ ಗುರ್ಜಾಪುರ, ಡಿ.ರಾಂಪೂರು, ಬೂರ್ದಿಪಾಡು ಮತ್ತು ಅತ್ಕೂರು ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, 800 ಜನ ಸಂತ್ರಸ್ತರನ್ನು ಈಗಾಗಲೇ ಸ್ಥಳಾಂತರ ಮಾಡಿ 4 ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸೊನ್ನ ಬ್ಯಾರೇಜ್‌ನಿಂದ 5.85 ಲಕ್ಷ ಕ್ಯುಸೆಕ್ ನೀರು ಭೀಮಾ ನದಿಗೆ ಹರಿಸಲಾಗಿದೆ. ಇಂದು 7.5 ಲಕ್ಷ ಕ್ಯುಸೆಕ್ ನೀರು ಹರಿಯಲಿದೆ, ಇದು 9 ಲಕ್ಷ ಕ್ಯುಸೆಕ್ ಹೆಚ್ಚಿದಲ್ಲಿ ಹಾನಿಯ ಪ್ರಮಾಣ ಹೆಚ್ಚಲಿರುವುದರಿಂದ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ.

ಜೂನ್ 1 ರಿಂದ ಸೆಪ್ಟಂಬರ್ ಅಂತ್ಯದವರೆಗೆ ಜಿಲ್ಲೆಯಲ್ಲಿ 440 ಮಿ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇ. 32 ರಷ್ಟು ಹೆಚ್ಚು ಮಳೆಯಾಗಿದೆ. ಅತಿವೃಷ್ಟಿಯಿಂದ ಹಾನಿಯಾದವರಿಗೆ ಎನ್.ಡಿ.ಆರ್.ಎಫ್ ನಾರ್ಮ್ಸ್ ಪ್ರಕಾರ, ಈಗಾಗಲೇ 61 ಕೋಟಿ ರೂ. ಪರಿಹಾರ ನೀಡಲಾಗಿದೆ. ಮಳೆಯಿಂದ 487 ಮನೆಗಳು ಭಾಗಶಃ ಕುಸಿದು ಬಿದ್ದಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಜೂನ್​ನಿಂದ ಇಲ್ಲಿಯವರೆಗೆ ಭಾರೀ ಮಳೆ, ಪ್ರವಾಹದಿಂದ ಒಟ್ಟು 18 ಜನರು ಮೃತಪಟ್ಟಿದ್ದು, ಎಲ್ಲ ಮೃತ ಕುಟಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ವಿವರಿಸಿದರು.

ಮಳೆಯಿಂದಾಗಿ ಜಿಲ್ಲೆಯಲ್ಲಿ 22,031 ಹೆಕ್ಟರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. ತೋಟಗಾರಿಕೆ ಬೆಳೆಯು 23,745 ಹೆಕ್ಟರ್ ಹಾನಿಯಾಗಿದ್ದು, ಕಳೆದ ಒಂದು ವಾರದ ಹಿಂದೆ ಸುರಿದ ಮಳೆಯಿಂದಾಗಿ ಹಾನಿಯಾಗಿರುವ ಬಗ್ಗೆ ಸರ್ವೆ ನಡೆಯುತ್ತಿದೆ. ಒಂದು ವಾರದಲ್ಲಿ ಎಲ್ಲ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಸಿಎಂಗೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.