ರಾಯಚೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನನಗೂ ಸಿಡಿ ಲೇಡಿಗೂ ಯಾವುದೇ ಸಂಬಂಧವಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಜಿಲ್ಲೆಯ ಲಿಂಗಸೂಗೂರು ಮುದಗಲ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನ್ ಬೇಕಾದರೂ ಮಾಡಲಿ, ಅದಕ್ಕೂ ನನಗೂ ಸಂಬಂಧವಿಲ್ಲ. ಅವರು ಒತ್ತಡದಲ್ಲಿದ್ದಾರೆ, ಅವರು ಏನಾದರೂ ಹೇಳಿಕೊಳ್ಳಲಿ. ನನಗೂ ಅದಕ್ಕೆ ಸಂಬಂಧವಿಲ್ಲ. ದಾಖಲೆಗಳಿದ್ದರೆ ತನಿಖೆಯಾಗಲಿ ಎಂದರು.
ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಒಳ್ಳೆಯ ಕ್ಯಾಂಡಿಡೇಟ್ ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ವೈಫಲ್ಯದಿಂದಾಗಿ ಹೆಚ್ಚಿನ ಮತಗಳಿಂದ ಗೆಲ್ಲುತ್ತೇವೆ ಎಂದರು.