ರಾಯಚೂರು: ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ ಅವರಿಗೆ ಪಕ್ಷದಲ್ಲಿ ಕೆಲಸ ಮಾಡದವರಿಗೆ ಟಿಕೆಟ್ ಕೊಡಲ್ಲ ಎಂದು ಹೇಳುವ ಅಧಿಕಾರವಿದೆ. ಅದರಲ್ಲಿ ಯಾವುದೇ ತಪ್ಪು ಇಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಲ್ಲರೂ ಸೇರಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತಾರೆ. ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಆದರೂ ಒಬ್ಬರ ನಿರ್ಧಾರ ಅಂತಿಮವಲ್ಲ. ಸಿದ್ದರಾಮಯ್ಯ ಮಾತನಾಡುವ ರೀತಿ ಬೇರೆ, ಡಿಕೆಶಿ ಮಾತನಾಡುವ ರೀತಿ ಬೇರೆಯಿದೆ. ಡಿಕೆಶಿ ಜೊರಾಗಿ ಮಾತನಾಡುತ್ತಾರೆ. ಅದು ಅವರ ಶೈಲಿ ಅಷ್ಟೇ. ಹಾಗಂತ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಅಸಮಾಧಾನವಿದೆ ಎಂದರ್ಥವಲ್ಲ ಎಂದು ಸಮರ್ಥಿಸಿಕೊಂಡರು.
ಸಿದ್ದರಾಮೊತ್ಸವ ಯಶಸ್ವಿಯಾಯ್ತು, ಆದರೆ ಟ್ರಾಫಿಕ್ ನಿರ್ವಹಣೆ ಆಗಲಿಲ್ಲ ಎನ್ನುವ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅದಕ್ಕೇ ನಾವು ಏನು ಮಾಡಲು ಆಗುತ್ತದೆ. ಹೆಚ್ಚು ಜನ ಬಂದ ಕಾರಣ ಪೊಲೀಸರಿಗೂ ನಿಯಂತ್ರಣ ಮಾಡಲು ಆಗಲಿಲ್ಲ. ಅದಕ್ಕೆ ಡಿಕೆಶಿ ಟ್ರಾಫಿಕ್ ಮ್ಯಾನೇಜ್ ಮಾಡುವಲ್ಲಿ ಸೋತಿದ್ದೇವೆ ಎಂದಿದ್ದಾರೆ. ಅದು ಕಾರ್ಯಕ್ರಮದ ಸೋಲಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ಜೊಲ್ಲು ಸುರಿಸುವುದು ಗೊತ್ತಿದೆ, ಹೇಳಿಕೆ ಅವರ ಸಂಸ್ಕೃತಿ ತಿಳಿಸುತ್ತದೆ : ಸಚಿವ ಬಿ ಸಿ ಪಾಟೀಲ