ಮಂತ್ರಾಲಯ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುದೇಂದ್ರ ತೀರ್ಥರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿವಿ ಕುಲಪತಿ ಚಂದ್ರಕಾಂತ್ ಯಾತನೂರು ಹಾಗೂ ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರ ಸಮ್ಮುಖದಲ್ಲಿ ಪೀಠಾಧಿಪತಿಗಳು ಸಾಮಾಜಿಕ ಕಾರ್ಯಕ್ರಮಗಳನ್ನ ಕಂಡು 2019 - 2020ನೇ ಸಾಲಿನಲ್ಲಿ ನೀಡುವ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಲಾಯಿತು.
ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಗೌರವ ಡಾಕ್ಟರೇಟ್ ಕಾರಣಾಂತರಗಳಿಂದ ಕಾರ್ಯಕ್ರಮದಲ್ಲಿ ಗೈರಾಗಿದ್ದರು. ಹೀಗಾಗಿ ಇಂದು ಗುಲ್ಬರ್ಗಾ ವಿವಿಯಿಂದ ಮಂತ್ರಾಲಯ ಮಠದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಯಿತು.