ರಾಯಚೂರು: ಹೈದ್ರಬಾದ್ನ ಪಶುವೈದ್ಯೆ ಮೇಲೆ ಅತ್ಯಾಚಾರ ಮತ್ತು ಕೊಲೆ ಖಂಡಿಸಿ, ರಾಯಚೂರು ಕರ್ನಾಟಕ ಪಶು ವೈದ್ಯಕೀಯ ಸಂಘದ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ನಗರದ ಮಹತ್ಮಾಗಾಂದಿ ಕ್ರೀಡಾಂಗಣದಿಂದ ಬಸವೇಶ್ವರ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿ, ಪಶುವೈದ್ಯೆಯ ಆತ್ಮಕ್ಕೆ ಶಾಂತಿ ಕೋರಲಾಯಿತು.
ಈ ಘಟನೆ ತೀವ್ರ ಅಘಾತಕಾರಿ ಹಾಗೂ ಪೈಶಾಚಿಕ ಕೃತ್ಯವಾಗಿದ್ದು,ಇಂತಹ ಘಟನೆಯಿಂದ ಹೆಣ್ಣು ಮಕ್ಕಳ ಮಾನಸಿಕ ಸ್ಥಿತಿ ಕುಗ್ಗುತ್ತದೆ. ಕೂಡಲೇ ತ್ವರಿತಗತಿಯಲ್ಲಿ ಪ್ರಕರಣ ಬೇದಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.