ರಾಯಚೂರು: ನಗರದ ನವೋದಯ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿವೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡನ ಮನೆಯವರ ವಿರುದ್ಧ ವರದಕ್ಷಿಣೆ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಶೃತಿ (26) ಮೃತ ವಿದ್ಯಾರ್ಥಿನಿ. ಈಕೆ ನವೋದಯ ದಂತ ಮಹಾವಿದ್ಯಾಲಯದಲ್ಲಿ ಅಭ್ಯಾಸ ಮಾಡುತ್ತಿದ್ದಳು. ಗಂಡನ ಮನೆಯ ವರದಕ್ಷಿಣೆ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮೂಲತಃ ತೆಲಂಗಾಣದವರಾಗಿದ್ದಾರೆ.