ರಾಯಚೂರು: ನಗರದಲ್ಲಿ ಹಲವು ದಿನಗಳಿಂದ ಚರಂಡಿಯಲ್ಲಿ ನೀರು ಬ್ಲಾಕ್ ಆಗಿದ್ದು, ಇದನ್ನು ನಗರಸಭೆ ಅಧ್ಯಕ್ಷ ಈ.ವಿನಯಕುಮಾರ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದುರಸ್ತಿ ಮಾಡಿಸಿದರು.
ಶಶಿಮಹಲಗ ಟಾಕೀಸ್ ಬಳಿಯಿರುವ ಚರಂಡಿ ನೀರು ಬ್ಲಾಕ್ ಆಗಿ ರಸ್ತೆಯ ಮೇಲೆ ಹರಿಯುತ್ತಿತ್ತು. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ನಿತ್ಯ ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆ ಅರಿತ ಈ.ವಿನಯಕುಮಾರ್ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಕಸ - ಕಡ್ಡಿಗಳಿಂದ ಬ್ಲಾಕ್ ಆಗಿದ್ದ ಚರಂಡಿ ಶುಚಿಗೊಳಿಸಿದರು.