ETV Bharat / state

ಮದ್ಯಪಾನ ಮಾಡಿ ವಾಹನ ಚಾಲನೆ: 2 ಲಾರಿಗಳ ಮಧ್ಯೆ ಡಿಕ್ಕಿ, ಚಾಲಕನಿಗೆ ಗಂಭೀರ ಗಾಯ - Lari Accident in Raicuru

ರಾಯಚೂರು ಮಹ್ಮದ್ ರಹೀಮ್ ಎಂಬ ಲಾರಿ ಚಾಲಕ ರಾಯಚೂರಿನಿಂದ ಚೆನ್ನೈಗೆ ಹೋಗುತ್ತಿದ್ದ ವೇಳೆ ಮದ್ಯಪಾನ ಮಾಡಿ ಲಾರಿ ಚಾಲನೆ ಮಾಡಿದ್ದಾನೆ. ಪರಿಣಾಮ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.

Drink And Drive in Raichuru
ಮದ್ಯಪಾನ ಮಾಡಿ ವಾಹನ ಚಾಲನೆ
author img

By

Published : Jan 11, 2021, 12:18 PM IST

ರಾಯಚೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

ನಗರದ ಹಳೆಯ ಜಿಲ್ಲಾಸ್ಪತ್ರೆ ಕಟ್ಟಡದ ಬಳಿ ಈ ದುರ್ಘಟನೆ ನಡೆದಿದೆ. ಮಹ್ಮದ್ ರಹೀಮ್ ಎಂಬ ಲಾರಿ ಚಾಲಕ ರಾಯಚೂರಿನಿಂದ ಚೆನ್ನೈಗೆ ಹೋಗುತ್ತಿದ್ದ ವೇಳೆ ಮದ್ಯಪಾನ ಮಾಡಿ ಲಾರಿ ಚಾಲನೆ ಮಾಡಿದ್ದಾನೆ. ಪರಿಣಾಮ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಮಹ್ಮದ್ ರಹೀಮ್ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಸಂಚಾರ ದಟ್ಟಣೆ ಸರಿಪಡಿಸಿದ್ದಾರೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಜ. 13 ರ ಸಂಜೆ ಪ್ರಮಾಣ ವಚನ ಸಮಾರಂಭ ನಡೆಯಬಹುದು: ಡಿಸಿಎಂ ಸವದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.