ETV Bharat / state

ಕುಡಿಯುವ ನೀರಿಗೆ ಕೋಟಿ ಕೋಟಿ ಸುರಿದರೂ ಗೆಜ್ಜಲಗಟ್ಟಾ ಗ್ರಾಮದಲ್ಲಿ ಜೀವಜಲಕ್ಕೆ ಹಾಹಾಕಾರ

2 ಕೋಟಿ ರೂಪಾಯಿ ಖರ್ಚು ಮಾಡಿ ಯೋಜನೆ ರೂಪಿಸಿದರೂ ಕುಡಿಯುವ ನೀರು ಪೂರೈಕೆಯಾಗಿಲ್ಲ ಎನ್ನುವ ಆರೋಪ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ಕೇಳಿಬಂದಿದೆ.

author img

By

Published : Mar 19, 2020, 1:30 PM IST

drinking water problem in raichuru
ಬೇಸಿಗೆ ಆರಂಭದಲ್ಲೆ ರಾಯಚೂರಿನಲ್ಲಿ ಕುಡಿಯುವ ನೀರಿಗೆ ಪರದಾಟ

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಕೋಟಿಯಷ್ಟು ಹಣ ಖರ್ಚು ಮಾಡಿದರೂ ನೀರು ಪೂರೈಕೆಯಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಬೇಸಿಗೆಯಲ್ಲಿ ತೊಂದರೆ ಆಗದಿರಲೆಂದು 2ಕೋಟಿ ರೂಪಾಯಿ ಖರ್ಚು ಮಾಡಿ ಕುಡಿಯುವ ನೀರು ಪೂರೈಕೆ ಯೋಜನೆ ರೂಪಿಸಲಾಗಿತ್ತು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಮಹಿಳೆಯರು ಅಪೂರ್ಣಾ ಕಾಮಗಾರಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆ ಅಡಿಯಲ್ಲಿ ಬೋರ್ ವೆಲ್ ಕೊರೆದು 6 ಕಡೆ ನೀರು ಪೂರೈಸುವ ಯೋಜನೆ ಬಳಕೆಗೆ ಬಾರದೆ ವಿಫಲವಾಗಿದೆ.

ಯೋಜನೆ ಕಳಪೆತನ, ವೈಫಲತೆ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಈಗಲೆ ಒಂದು ಕೊಡ ನೀರಿಗಾಗಿ ಪರದಾಡುವಂತಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಅಧ್ಯಕ್ಷ ಕಿರಣ ದೂರಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.