ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣವನ್ನು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನೂರಾರು ಯುವಕರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಅಷ್ಟೆಅಲ್ಲದೇ ನಗರದಲ್ಲಿ ಹಮ್ಮಿಕೊಳ್ಳಲಾದ ರಾಹುಲ್ಗಾಂಧಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಮೂಲಕ ಸಮಗ್ರ ತನಿಖೆಗೆ ಒತ್ತಾಯಿಸುವ ಬೇಡಿಕೆ ಇಟ್ಟುಕೊಂಡು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದ್ರೆ ಬಿಗಿ ಪೊಲೀಸ್ ಭದ್ರತೆಯ ಮಧ್ಯೆ ವಿಫಲ ಯತ್ನ ನಡೆಸಿದರು.
ಈ ಮಾಹಿತಿಯನ್ನು ಪಡೆದ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದುಕೊಂಡು ಹೋದರು.