ರಾಯಚೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ಕಾರ್ಯಕರ್ತರು ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಡಾ. ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಲ್ಲಿ ಸುಗ್ರೀವಾಜ್ಞೆ ಪ್ರತಿ ಸುಟ್ಟು ಹಾಕಿ ಪ್ರತಿಭಟಿಸಿದರು. ಆಡಳಿತ ನಡೆಸುವ ಸರ್ಕಾರಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಒಳಿತು ಮಾಡುವ ಕಾಯ್ದೆಯನ್ನು ಜಾರಿಗೊಳಿಸಬೇಕು. ಆದ್ರೆ ಬಿಜೆಪಿ ಸರ್ಕಾರ ಉಳ್ಳವರಿಗೆ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತಹ ಕಾಯ್ದೆ ಜಾರಿಗೊಳಿಸುವ ಮೂಲಕ ರೈತರಿಗೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮುಂದುವರೆದು, ಇದರಿಂದ ರೈತ ಸಮುದಾಯ ದಿವಾಳಿಯಾಗುತ್ತದೆ. ಹೀಗಾಗಿ ಕೂಡಲೇ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯ ಸುಗ್ರೀವಾಜ್ಞೆ ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.