ರಾಯಚೂರು: ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ತಾಲೂಕಿನ ಹುಣಶಿಹಾಳಹುಡಾ ಗ್ರಾಮದಲ್ಲಿ ನಡೆದಿದೆ.
ರೈತ ಚಂದ್ರಶೇಖರ ಓಂಕಾರಿ(55) ಮೃತ ದುರ್ದೈವಿ. ಮುಂಗಾರು ಹಿನ್ನೆಲೆ ರೈತ ಹೊಲದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು-ಮಿಂಚು, ಗಾಳಿ ಸಹಿತ ಅಲಲ್ಲಿ ಮಳೆ ಸುರಿಯುತ್ತಿದೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.