ರಾಯಚೂರು: ಸಾಲಭಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಗೌಡನಬಾವಿ ಗ್ರಾಮದ ಅಮರೇಗೌಡ (50) ಮೃತ ರೈತ. ಈತ ಸಿಂಧನೂರು ಕೋ.ಆಪರೇಟಿವ್ ಬ್ಯಾಂಕ್ನಲ್ಲಿ ಜಮೀನು ದಾಖಲೆಗಳನ್ನಿಟ್ಟು 1.56 ಸಾವಿರ ರೂಪಾಯಿ ಸಾಲ ಪಡೆದಿದ್ದ. ಬೆಳೆ ಕೈಕೊಟ್ಟಿದ್ದರಿಂದ ಸಾಲ ಮರು ಪಾವತಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಬಳಗಾನೂರು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.