ರಾಯಚೂರು: ಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭೀಮನಗೌಡ(30) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ.
ಮನೆಯ ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಈ ಕುರಿತು ಜಾಲಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.