ರಾಯಚೂರು: ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘರ್ಷ ಸಮಿತಿ ಪದಾಧಿಕಾರಿಗಳು ಕೇಂದ್ರ ಅಂಚೆ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದು, ಈ ವೇಳೆ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ನಗರದ ಕೇಂದ್ರ ಅಂಚೆ ಕಚೇರಿ ಬಳಿ ಜಮಾಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಚೇರಿಗೆ ಮುತ್ತಿಗೆ ಹಾಕಲು ಯುತ್ನಿಸಿದರು. ಇದನ್ನು ಕಂಡ ಪೊಲೀಸರು ರೈತರನ್ನು ತಡೆದು ಕೆಲ ಕಾಲ ಬಂಧಿಸಿ ನಂತರ ಬಿಡುಗಡೆ ಮಾಡಿದರು.
ರೈತ ವಿರೋಧಿ ಕೃಷಿ ಕಾಯ್ದೆಗಳು, ರೈತ ಉತ್ಪನ್ನ ವಾಣಿಜ್ಯ ಮತ್ತು ಮಾರಾಟ ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್ ಕಾಯ್ದೆಗಳನ್ನು ವಾಪಸ್ ಪಡೆಯಬೇಕು.
ಡಾ. ಸ್ವಾಮಿನಾಥನ್ ವರದಿಯನ್ವಯ ಎಲ್ಲಾ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚದ ಮೇಲೆ ಶೇ. 50ರಷ್ಟು ಲಾಭ ಸೇರಿಸಿ ಕನಿಷ್ಠ ಬೆಂಬಲ ಬೆಲೆ ಖಾತರಿ ಮಾಡುವ ಬೆಂಬಲ ಬೆಲೆ ಕಾನೂನು ಎಲ್ಲಾ ರೈತರು, ಕೃಷಿ, ಕೂಲಿಕಾರರಿಗೆ ಅಗತ್ಯವಿರುವ ಬ್ಯಾಂಕ್ ಸಾಲ ನೀಡಬೇಕು. ವಿಶೇಷ ಸಂದರ್ಭದಲ್ಲಿ ಸಾಲ ಮನ್ನಾ ಮಾಡಬೇಕು. ಋಣಮುಕ್ತ ಕಾಯ್ದೆಯನ್ನು ಅಂಗೀಕರಿಸಬೇಕು ಎಂದು ಆಗ್ರಹಿಸಿದರು.