ರಾಯಚೂರು: ವಿದ್ಯುತ್ ತಂತಿ ತಗುಲಿ ತಂದೆ, ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ದಿನ್ನಿ ಗ್ರಾಮದಲ್ಲಿ ನಡೆದಿದೆ.
ಮಹೇಶ ಆನಂದಪ್ಪ(46), ವಿನೋದ್ ಮಹೇಶ್(16) ಮೃತಪಟ್ಟವರು. ಮನೆಯಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಆಗ ತಂದೆ ಮಹೇಶ್, ಏನಾಗಿದೆ ಎಂದು ನೋಡಲು ತೆರಳಿದ್ದ ವೇಳೆ ತಂತಿಯಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ವೇಳೆ ಕೆಳಗೆ ಬಿದ್ದ ತಂದೆಯನ್ನು ನೋಡಲು ಹೋದ ಮಗನಿಗೂ ವಿದ್ಯುತ್ ತಗುಲಿದೆ ಎನ್ನಲಾಗಿದೆ.
ಘಟನೆ ಸಂಬಂಧ ಪ್ರಕರಣ ದಾಖಲಾಗಿಲ್ಲ.