ರಾಯಚೂರು: ಪ್ರವಾಹದ ಭೀತಿಯಿಂದಾಗಿ ತಾಲೂಕಿನ ನದಿಪಾತ್ರದ ಗ್ರಾಮಗಳಾದ ಅತ್ಕೂರು, ಕುರ್ವಕುಂದಾ, ಕುರ್ವಕುಲಾ ಗ್ರಾಮಗಳಿಗ ತೆಪ್ಪದ(ಹರಗೋಲ) ಮೂಲಕ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ನದಿಪಾತ್ರದ ಜನರು ಹೈಅಲರ್ಟ್ ಆಗಿರಬೇಕು. ನೀರಿನಮಟ್ಟದ ಪರಿಶೀಲನೆ ಮಾಡುವುದರ ಜೊತೆಗೆ ಸ್ಥಳೀಯರಿಗೆ ಪಡಿತರ ವಿತರಣೆಯಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮೀಕಾಂತ್ ರೆಡ್ಡಿ ಮಾತನಾಡಿ, ನದಿಗೆ ಹಾಕಿರುವ ಪಂಪ್ ಸೆಟ್ಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಪಿಡಿಓ ಅವರಿಗೆ ಸೂಚಿಸಿದರು.
ಶುದ್ಧ ಕುಡಿಯುವ ನೀರಿನ ಟ್ಯಾಂಕ್ ದುರಸ್ತಿಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಗಳಿಗೆ ಅಧಿಕಾರಿಗಳ ದಂಡು ಭೇಟಿ ನೀಡಿದ ಸಮಯದಲ್ಲಿಯೂ ಮಳೆಯ ಸುರಿಯುತ್ತಲೇ ಇತ್ತು.