ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಶಕ್ತಿನಗರದಲ್ಲಿ ನಡೆದಿದೆ.
ತಾಲೂಕಿನ ಶಕ್ತಿನಗರದ ಎರಡನೇ ಕ್ರಾಸ್ ಬಳಿ ಬಟ್ಟೆ ಅಂಗಡಿಯೊಂದರಲ್ಲಿ ನಿನ್ನೆ ತಡರಾತ್ರಿ ಘಟನೆ ಜರುಗಿದೆ. ಸಿದ್ದು ಸ್ವಾಮಿ ಎಂಬವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಬೆಂಕಿ ತಗುಲಿದೆ. ಪರಿಣಾಮ ಅಪಾರ ಪ್ರಮಾಣದ ಹಾನಿಯಾಗಿದೆ.
ಇದನ್ನೂ ಓದಿ: ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ: ಕಾಯ್ದೆ ಸಂಬಂಧ ಸರ್ಕಾರದಿಂದ ಅಧಿಸೂಚನೆ!
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಶಕ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.