ರಾಯಚೂರು: ಕೃಷ್ಣಾ ನದಿ ಪ್ರವಾಹದಿಂದ ರಾಯಚೂರು ಜಿಲ್ಲೆಯ ನಡುಗಡ್ಡೆ ಪ್ರದೇಶಗಳು ಸಂಪೂರ್ಣ ಹಾನಿಗೊಂಡಿರುವ ಪರಿಣಾಮ ಅಲ್ಲಿನ ನಿವಾಸಿಗಳನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ನಾರಾಯಣಪುರ ಜಲಾಶಯದಿಂದ 6 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರನ್ನು ನದಿಗೆ ಬಿಟ್ಟಿದ್ದರಿಂದ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮ್ಯಾದರಗಡ್ಡಿ, ಕಡದರಗಡ್ಡಿ, ಕರಕಲಗಡ್ಡಿ ಸೇರಿದಂತೆ ಹಲವು ನಡುಗಡ್ಡೆ ಪ್ರದೇಶಗಳಿಗೆ ನೀರು ನುಗ್ಗಿತ್ತು. ಇದಕ್ಕೂ ಮೊದಲೇ ಜಿಲ್ಲಾಡಳಿತದಿಂದ ನಡುಗಡ್ಡೆ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದು ಪರಿಹಾರ ಕೇಂದ್ರದಲ್ಲಿ ಇರಿಸಲಾಗಿತ್ತು.
ಆದ್ರೆ, ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಲಾಗಿತ್ತು. ಹೀಗಾಗಿ ನಮಗೆ ಶಾಶ್ವತ ಸೂರು ಕಲ್ಪಿಸಿಕೊಡಬೇಕು. ಪರಿಹಾರ ಒದಗಿಸಬೇಕು. ಅಲ್ಲಿಯವರೆಗೂ ಪರಿಹಾರ ಕೇಂದ್ರ ಬಿಟ್ಟು ಹೋಗುವುದಿಲ್ಲ ಎಂದು ಸಂತ್ರಸ್ತರು ಪಟ್ಟು ಹಿಡಿದಿದ್ದಾರೆ. ಈ ಕುರಿತು 'ಈಟಿವಿ ಭಾರತ' ಪ್ರತಿನಿಧಿ ಅಲ್ಲಿರುವ ಸಂತ್ರಸ್ತರೊಂದಿಗೆ ನಡೆಸಿರುವ ಚಿಟ್-ಚಾಟ್ ಇಲ್ಲಿದೆ ನೋಡಿ.