ರಾಯಚೂರು: ಜಿಲ್ಲೆಯಲ್ಲಿ ಪ್ರವಾಹ ಭೀತಿ ಹಿನ್ನಲೆ ಪೊಲೀಸ್ ಅಧಿಕಾರಿಗಳು, ಎನ್ಡಿಆರ್ಎಫ್ ತಂಡದೊಂದಿಗೆ ಜಿಲ್ಲಾಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಈ ಸಭೆ ನಡೆಸಲಾಯಿತು. ಆಲಮಟ್ಟಿ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನ ಹರಿ ಬಿಡಲಾಗುತ್ತಿದೆ. ಜಲಾಶಯದ ಹೆಚ್ಚುವರಿ ನೀರನ್ನ ಹರಿ ಬಿಡುತ್ತಿರುವ ಪರಿಣಾಮ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನಾರಾಯಣಪುರ ಜಲಾಶಯದಿಂದ ಕಳೆದ ಎರಡ್ಮೂರು ದಿನಗಳಿಂದ ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರಿನ್ನ ನದಿಗೆ ಹರಿ ಬೀಡಲಾಗಿದೆ. ರಾಯಚೂರು ಜಿಲ್ಲೆಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ. ಹೀಗಾಗ ಮುಜಾಗ್ರತವಾಗಿ ಎನ್ಡಿಆರ್ಎಫ್ ಹಾಗು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ರು.
ಸದ್ಯ 1.48 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬಿಡಲಾಗುತ್ತಿದ್ದೆ. ಇದರಿಂದ ಶೀಲಹಳ್ಳಿ ಮುಳುಗವ ಹಂತಕ್ಕೆ ಬಂದಿದೆ. ಈ ಸೇತುವೆ ಮೇಲೆ ಓಡಾಟವನ್ನ ನಿಲ್ಲಿಸಬೇಕು. ವಾಹನ ಸಂಚಾರವನ್ನ ನಿರ್ಬಂಧಿಸುವ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರವಾಹ ಎದುರಾದರೆ ಸಂತ್ರಸ್ಥರಿಗೆ ಆಹಾರ ಧಾನ್ಯಗಳನ್ನು ವಿತರಿಸಬೇಕು. ಕೇಂದ್ರ ಸರ್ಕಾರದ ಆತ್ಮನಿರ್ಭರ್ ಯೋಜನೆ ಮತ್ತು ರಾಜ್ಯ ಸರ್ಕಾರದಿಂದ ಮುಂದಿನ ಎರಡು ತಿಂಗಳು ಮಟ್ಟಿಗೆ ಪಡಿತರ ಧಾನ್ಯಗಳನ್ನು ವಿತರಿಸಬೇಕು. ನಡುಗಡ್ಡೆ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಈಗಾಗಲೇ ನದಿ ತೀರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳನ್ನು ಗುರುತಿಸಿ ಜನರು ನದಿ ಹತ್ತಿರ ಬಾರದಂತೆ ತಡೆಯಲಾಗುತ್ತಿದೆ. ಸಂತ್ರಸ್ಥರನ್ನು ತಾತ್ಕಾಲಿವಾಗಿ ಸ್ಥಳಾಂತರಿಸಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಅವರಿಗೆ ಅಗತ್ಯ ನೀರು, ಆಹಾರ ಸೇರಿದಂತೆ ಅಗತ್ಯ ಸೌಕರ್ಯವನ್ನು ಕಲ್ಪಿಸಬೇಕೆಂದರು.
ತಾಲೂಕು ಕೇಂದ್ರಗಳಲ್ಲಿ ಕೋವಿಡ್-19, ಕಾಲುವೆ ಬಳಿ ಕಾರ್ಯನಿರ್ವಹಿಸುತ್ತಿರುವ ನಾನಾ ಇಲಾಖೆಯ ಸಿಬ್ಬಂದಿಗಳಿಗೆ ಪ್ರವಾಹದ ಜವಬ್ದಾರಿ ನೀಡಬೇಕಾಗಿದೆ. ಲಿಂಗಸೂಗೂರು ರಾಯಚೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ ಆಯಾ ತಾಲೂಕುಗಳ ಡಿವೈಎಸ್ಪಿ, ಸಿಪಿಐ ಅಧಿಕಾರಿಗಳ ಸಹಭಾಗಿತ್ವದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ನದಿ ತೀರದ ಪ್ರದೇಶಗಳ ಮೇಲೆ ನಿಗಾವಹಿಬೇಕು ಎಂದರು .
ಎನ್ಡಿಆರ್ಎಫ್ ತಂಡದ ಇನ್ಸ್ಪೆಕ್ಟರ್ ದಿವಾಕರ್ ಸಿಂಗ್, ಎಸ್ಪಿ ಪ್ರಕಾಶ್ ಅಮೃತ್ ನಿಕ್ಕಂ, ಜಿ.ಪಂ. ಸಿಇಒ ಲಕ್ಷ್ಮೀಕಾಂತ್ ರೆಡ್ಡಿ, ಇತರರು ಉಪಸ್ಥಿತರಿದ್ದರು.