ETV Bharat / state

ರಾಯಚೂರಿನಲ್ಲಿ ಪ್ರತಿಭಟನೆ ವೇಳೆ ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ - ರಾಯಚೂರು ಬಿಜೆಪಿ ಪ್ರತಿಭಟನೆ

ಆಗ ಮಾಜಿ ಶಾಸಕ ಪಾಪಾರೆಡ್ಡಿ ಮತ್ತು ಪ್ರತಿಭಟನಾನಿರತರು ಪೊಲೀಸರೊಂದಿಗೆ ಮಾತಿನ‌ ಚಕಮಕಿ ನಡೆಸಿದ್ದಾರೆ. ಆ ವೇಳೆ ಪ್ರತಿಕೃತಿಯನ್ನು ಪೊಲೀಸ್ ಸಿಬ್ಬಂದಿ ಎತ್ತಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಆಗ ಪಾಪಾರೆಡ್ಡಿ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ..

former MLA slaps police staff at raichur
ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ
author img

By

Published : Nov 3, 2021, 1:59 PM IST

Updated : Nov 3, 2021, 3:41 PM IST

ರಾಯಚೂರು : ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸುತ್ತಿರುವ ವೇಳೆ ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ‌ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಈ ಘಟನೆ ಜರುಗಿದೆ. ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಎ. ಪಾಪಾರೆಡ್ಡಿ, ಪಶ್ಚಿಮ ಠಾಣೆ ಪೊಲೀಸ್ ಕಾನ್ಸ್​​ಟೇಬಲ್​ಗೆ ಕಪಾಳ ಮೋಕ್ಷ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ.

ಮಾಜಿ ಶಾಸಕರಿಂದ ಕಪಾಳ ಮೋಕ್ಷ

ದಲಿತರ ಕುರಿತು ಅವಳನೇಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ, ಅವರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದ್ರೆ‌, ಪೊಲೀಸರು ಪ್ರತಿಕೃತಿ‌ ದಹಿಸಲು ಅವಕಾಶ ನೀಡಲಿಲ್ಲ.

ಆಗ ಮಾಜಿ ಶಾಸಕ ಪಾಪಾರೆಡ್ಡಿ ಮತ್ತು ಪ್ರತಿಭಟನಾನಿರತರು ಪೊಲೀಸರೊಂದಿಗೆ ಮಾತಿನ‌ ಚಕಮಕಿ ನಡೆಸಿದ್ದಾರೆ. ಆ ವೇಳೆ ಪ್ರತಿಕೃತಿಯನ್ನು ಪೊಲೀಸ್ ಸಿಬ್ಬಂದಿ ಎತ್ತಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಆಗ ಪಾಪಾರೆಡ್ಡಿ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಗುಂಡಿಮಯ : ವಾಹನ ಸವಾರರ ಪರದಾಟ

ಪೊಲೀಸರು ಪ್ರತಿಕೃತಿಗೆ ಬೆಂಕಿ ಹಚ್ಚುವುದನ್ನು ತಡೆಯಲು‌ ಮುಂದಾದರೂ ಕೊನೆಗೂ ಪ್ರತಿಕೃತಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.

Last Updated : Nov 3, 2021, 3:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.