ರಾಯಚೂರು: ಮಾಜಿ ವಿಧಾನ ಪರಿಷತ್ ಸದಸ್ಯ ಅಮರನಾಥ ಪಾಟೀಲ ಕಾರು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೊಲಪಲ್ಲಿ ಬಳಿ ನಡೆದ ಸರಣಿ ರಸ್ತೆ ಅಪಘಾತದಲ್ಲಿ ಈ ಘಟನೆ ಸಂಭವಿಸಿದೆ. ಮಸ್ಕಿಯಲ್ಲಿ ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ಇನ್ನೋವಾ ಕಾರು ಮೂರು ಬಾರಿ ಮೂರು ಪಲ್ಟಿ ಹೊಡೆದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.