ರಾಯಚೂರು: ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಘಟನೆ ಸಿಂಧನೂರು ತಾಲೂಕಿನ ಬಾಲಾಜಿ ಕ್ಯಾಂಪ್ ಬಳಿ ಸಂಭವಿಸಿದೆ. ಅವಘಡದಲ್ಲಿ ಪತಿ, ಪತ್ನಿ ಹಾಗು ಇಬ್ಬರು ಮಕ್ಕಳು (ಗಂಡು, ಹೆಣ್ಣು) ಮೃತಪಟ್ಟಿದ್ದಾರೆ.
ಇದನ್ನೂ ಓದಿ: ನರ್ಮದಾ ನದಿಗೆ ಬಿದ್ದ ಬಸ್; 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ!
ಮೃತರನ್ನು ಪ್ರದೀಪ್ (35), ಪೂರ್ಣಿಮಾ (30) ಮಕ್ಕಳಾದ ಜಿತಿನ್ (12) ಮತ್ತು ಮಾಹೀನ್ (7) ಎಂದು ಗುರುತಿಸಲಾಗಿದೆ. ಗೋವಾದಿಂದ ಹೈದರಾಬಾದ್ಗೆ ವಾಪಸ್ಸಾಗುತ್ತಿದ್ದಾಗ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಬಳಗನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಮೃತರ ಸಂಬಂಧಿಕರನ್ನು ಸಂಪರ್ಕಿಸಿ ಮಾಹಿತಿ ಮುಟ್ಟಿಸಿದ್ದಾರೆ.

ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಶೋಧ ನಡೆಸುತ್ತಿದ್ದಾರೆ. ಬಳಗನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.