ರಾಯಚೂರು: ರಾಯಚೂರು ಬೃಹತ್ ಶಾಖೋತ್ಪನಾ ಘಟಕದ ನಾಲ್ಕು ವಿದ್ಯುತ್ ಘಟಕಗಳು ಸ್ಥಗಿತಗೊಂಡಿದ್ದು, ತಾಲೂಕಿನ ಶಕ್ತಿನಗರದಲ್ಲಿರುವ ವಿದ್ಯುತ್ ಉತ್ಪಾದನಾ ಸ್ಥಾವರ 8 ಘಟಕಗಳ ಪೈಕಿ, ನಾಲ್ಕು ಘಟಕಗಳು ವಿದ್ಯುತ್ ಉತ್ಪಾದನೆ ನಿಲ್ಲಿಸಿವೆ.
1720 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯವಿರುವ ಕೇಂದ್ರದಲ್ಲಿ ಸದ್ಯ ನಾಲ್ಕು ಘಟಕಗಳಿಂದ 578 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 1,3,6,8 ಘಟಕಗಳು ವಿದ್ಯುತ್ ಉತ್ಪಾದನೆ ಮಾಡುತ್ತಿದ್ದರೆ, 2,4,5,7ನೇ ಘಟಕಗಳು ಬಂದ್ ಆಗಿವೆ. ಕಲ್ಲಿದ್ದಲಿನ ಕೊರತೆಯಿಂದ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಆರ್ಟಿಪಿಎಸ್ ಎಕ್ಸಿಕ್ಯೂಟ್ ಡೈರೆಕ್ಟರ್(ಇಡಿ)ಅನ್ನು ದೂರವಾಣಿ ಮೂಲಕ ಸಂಪರ್ಕಿಸಿದರೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಆರ್ಟಿಪಿಎಸ್ನಿಂದ ರಾಜ್ಯದ ವಿದ್ಯುತ್ ಜಲಕ್ಕೆ ಅಪಾರ ಪ್ರಮಾಣದಲ್ಲಿ ವಿದ್ಯುತ್ ರವಾನಿಸಲಾಗುತ್ತದೆ. ಆದರೆ, ಬೇಸಿಗೆ ಸಮಯದಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿರುವುದರಿಂದ ವಿದ್ಯುತ್ ಸಮಸ್ಯೆ ತಲೆದೋರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.