ETV Bharat / state

ರಾಯಚೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಿಕಿತ್ಸೆ ಫಲಿಸದೇ ಸಾವು - Gang rape of woman in Raichur

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮಹಿಳೆಯನ್ನು ಬಲವಂತವಾಗಿ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ. ಅಸ್ವಸ್ಥಳಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ರಾಯಚೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

author img

By

Published : May 27, 2023, 11:52 AM IST

Updated : May 27, 2023, 12:37 PM IST

ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇ 23 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮೇ 23 ರಂದು ಈ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಡಪತ್ರಿ ಹೊಲೆದು ಜೀವನ ನಡೆಸುತ್ತಿದ್ದ ಗೃಹಿಣಿಯನ್ನು ಒತ್ತಾಯಪೂರ್ವಕವಾಗಿ ಆರೋಪಿ ಮಲ್ಲಪ್ಪ ಗುಂಡಪ್ಪ ಹಾಗೂ ಆತನ ಮೂವರು ಸಹಚರರು‌ ಸೇರಿಕೊಂಡು ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಡಪತ್ರಿ ಹೊಲೆಸಿಕೊಂಡು ಬರಲು ಹೋಗುವ ನೆಪದಲ್ಲಿ ಗೃಹಿಣಿ ಜೊತೆ ಆರೋಪಿಗಳು ಸಲುಗೆ ಬೆಳೆಸಿಕೊಂಡಿದ್ದರು. ಇದಾದ ಬಳಿಕ ಹಲವು ಬಾರಿ ಆಕೆಯ ಜೊತೆಗೆ ದೈಹಿಕ ಸಂಪರ್ಕಕ್ಕಾಗಿ ಒತ್ತಾಯಿಸಿದ್ದರು. ಇದನ್ನು ಗೃಹಿಣಿ ವಿರೋಧಿಸಿದ್ದಳು. ಆದರೆ, ಮೇ 23 ರಂದು ಆರೋಪಿ ಮಲ್ಲಪ್ಪ ಬೈಕ್​ನಲ್ಲಿ ಆಕೆಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದ.

ಸಾಮೂಹಿಕ ಅತ್ಯಾಚಾರ: ಮಹಿಳೆಯನ್ನು ಕರೆದೊಯ್ದ ಆರೋಪಿಗಳು ಗ್ರಾಮದ ಕಾಲುವೆ ಬಳಿ ಸಾಮೂಹಿಕ ಅತ್ಯಾಚಾರ ಮಾಡಿ ಬಿಟ್ಟು ಹೋಗಿದ್ದರು. ಇದನ್ನು ಗ್ರಾಮದ ವ್ಯಕ್ತಿಯೊಬ್ಬರು ಕಂಡು ಮಹಿಳೆಯ ಪುತ್ರನಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಕುಟುಂಬಸ್ಥರು, ಗಾಯಗೊಂಡು ರಕ್ತಸಿಕ್ತವಾಗಿವ ಬಿದ್ದಿದ್ದ ಮಹಿಳೆಯನ್ನು ಕಂಡಿದ್ದಾರೆ.

ತಕ್ಷಣವೇ ಆಕೆಯನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಾದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಮೇ 24 ರಂದು ಮಹಿಳೆ ಮೃತಪಟ್ಟಿದ್ದಾಳೆ. ಸಂತ್ರಸ್ತೆಯ ಮೈಮೇಲೆ ಗಾಯದ ಗುರುತುಗಳಿದ್ದು, ಬಲತ್ಕಾರಕ್ಕೂ ಮೊದಲು ಆಕೆಯ ಹಲ್ಲೆ ನಡೆಸಲಾಗಿದೆ ಎಂದು ಶಂಕಿಸಲಾಗಿದೆ.

ಮಹಿಳೆ ಹೇಳಿಕೆ: ಸಾವಿಗೂ ಮೊದಲು ಸಂತ್ರಸ್ತ ಮಹಿಳೆ ಆರೋಪಿಗಳ ಬಗ್ಗೆ ಹೇಳಿಕೆ ನೀಡಿದ್ದಾರೆ. ಆಘಾತದಿಂದ ತುಸು ಚೇತರಿಸಿಕೊಂಡಿದ್ದ ಮಹಿಳೆ, ನಡೆದ ಘಟನೆಯ ಬಗ್ಗೆ ಪುತ್ರನ ಬಳಿಕ ಹೇಳಿಕೊಂಡಿದ್ದಾಳೆ. ತನ್ನ ಮೇಲೆ ಆರೋಪಿ ಮಲ್ಲಪ್ಪ ಸೇರಿದಂತೆ ಮೂವರು ಬಲವಂತವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನಮ್ಮ ಜೊತೆ ಸಹಕರಿಸಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದರು ಎಂದು ತಿಳಿಸಿದ್ದರು.

ಇದಾದ ಬಳಿಕ ಮಹಿಳೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಅಸುನೀಗಿದ್ದರು. ಮಹಿಳೆ ನೀಡಿದ ಹೇಳಿಕೆಯ ಮೇರೆಗೆ ಪುತ್ರ ಸಿಂಧನೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾನೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಲ್ವರು ಆರೋಪಿಗಳಲ್ಲಿ ಎ1 ಆರೋಪಿ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು, ನಾಪತ್ತೆಯಾದ ಇನ್ನೂ ಮೂವರಿಗಾಗಿ ಜಾಲ ಬೀಸಿದ್ದಾರೆ.

ದೆಹಲಿಯ ಪ್ರಕರಣದಲ್ಲಿ ಸರಣಿ ಅತ್ಯಾಚಾರಿಗೆ ಶಿಕ್ಷೆ: 6 ವರ್ಷದಲ್ಲಿ 38 ಬಾಲಕಿಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಆರೋಪಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಕಠಿಣ ಶಿಕ್ಷೆ ವಿಧಿಸಿತ್ತು. ಈತನ ವಿರುದ್ಧ ಇರುವ ಆರೋಪಗಳಲ್ಲಿ ಎರಡೂವರೆ ವರ್ಷದ ಬಾಲಕಿಯೂ ಬಲಿಯಾಗಿರುವುದು ದುರಂತ.

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಬಡಮಕ್ಕಳನ್ನು ಟಾರ್ಗೆಟ್​ ಮಾಡಿ ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡುತ್ತಿದ್ದ ಕೀಚಕನನ್ನು ಪೊಲೀಸರು 6 ವರ್ಷದ ಬಾಲಕಿ ಅಪಹರಣ, ಹತ್ಯೆ ಪ್ರಕರಣದಲ್ಲಿ ಬಂಧಿಸಿದ್ದರು. ವಿಚಾರಣೆಯ ವೇಳೆ ಈತ ತನ್ನ ಕ್ರೌರ್ಯದ ಬಗ್ಗೆ ಒಂದೊಂದಾಗಿ ಬಾಯ್ಬಿಟ್ಟಿದ್ದ.

ಓದಿ: ಮೊಬೈಲ್​ಗಾಗಿ ಜಲಾಶಯದ ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿಗೆ ಅಮಾನತು ಶಿಕ್ಷೆ

Last Updated : May 27, 2023, 12:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.