ರಾಯಚೂರು: ಹಾವು ಕಚ್ಚಿ ಬಾಲಕಿ ಸಾವ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಇ.ಜೆ.ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಸಜ್ಜಾದ್ ಬೇಗಂ (11) ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದ ವೇಳೆ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸದ್ಯ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.