ರಾಯಚೂರು: ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ತಾಲೂಕಿನ ಗ್ರಾಮವೊಂದರ ಬಾಲಕಿ ಭಾನುವಾರ ರಿಮ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಹೊಟ್ಟೆನೋವೆಂದು ಚಿಕಿತ್ಸೆಗೆ ಆಸ್ಪತ್ರೆಗೆ ಬಂದಾಗ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.
ವಿವಾಹಿತ ವ್ಯಕ್ತಿಯೊಬ್ಬ ಈ ಹಿಂದೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಈ ವಿಚಾರ ಬಾಲಕಿ ತನ್ನ ಪೋಷಕರಿಗೆ ವಿಷಯ ತಿಳಿಸಿರಲಿಲ್ಲ. ಆದರೆ ಹೊಟ್ಟೆನೋವಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಾಗ ವಿಚಾರ ಬೆಳಕಿಗೆ ಬಂದಿದೆ.
ಪ್ರಕರಣ ಕುರಿತು ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕ ಸಮಿತಿಯವರು ವಿಚಾರಣೆ ನಡೆಸಿದ್ದಾರೆ. ಪೋಕ್ಸೋ ಕಾಯ್ದೆ ಹಾಗೂ ವಿವಿಧ ಸೆಕ್ಷನ್ ಅಡಿಯಲ್ಲಿ ರಾಯಚೂರು ಮಹಿಳಾ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.