ETV Bharat / state

ಪ್ರವಾಹ ‌ಪೀಡಿತರಿಗೆ ಬೇಗನೆ ಪರಿಹಾರ ವಿತರಿಸಿ: ಜಾವೇದ ಅಕ್ತರ್

ಶುಕ್ರವಾರ ಸಂಜೆ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕಾರ್ಯದ ಕುರಿತು ಅಧಿಕಾರಿಗಳ ಸಭೆ ನಡೆಯಿತು.

raichur district
author img

By

Published : Aug 17, 2019, 2:56 AM IST

ರಾಯಚೂರು: ಕೃಷ್ಣ ನದಿ ಪ್ರವಾಹ ಪೀಡಿತರಿಗೆ ಆದಷ್ಟು ಬೇಗನೆ ಪರಿಹಾರ ವಿತರಿಸಿ ಅವರು ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡಿದ್ದಾರೆ, ನೇರವಾಗಿ ಅವರ ಖಾತೆಗೆ ಹಣವನ್ನು ಹಾಕಿ ಎಂದು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ ಅಕ್ತರ್ ಹೇಳಿದರು.

ರಾಯಚೂರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಕರೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 200 ಜನರಿರುವ ಕಡೆ 24 ಗಂಟೆಗಳ ಕಾಲ ಆರೋಗ್ಯ ಸೇವೆ ನೀಡಬೇಕು. ಶುದ್ಧ ಕುಡಿಯುವ ನೀರು ಒದಗಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಮತ್ತು ಆಗಾಗ ಜನರ ಆರೋಗ್ಯ ಪರೀಕ್ಷೆ ಮಾಡುತ್ತಿರಬೇಕು ಎಂದು ಹೇಳಿದರು.

raichur district
ಅಧಿಕಾರಿಗಳ ಸಭೆ

ಜಿಲ್ಲಾಧಿಕಾರಿ ಶರತ್.ಬಿ ಮಾತನಾಡಿ, ಪ್ರವಾಹದ ವೇಳೆ ರಕ್ಷಣಾ ಕಾರ್ಯದಲ್ಲಿ ಭಾರತೀಯ ಸೇನೆಯ 102 ಜನ, ಎನ್​ಡಿಆರ್​ಎಫ್​ನ 45 ಸಿಬ್ಬಂದಿ ಹಾಗೂ ಒಂದು ಸೇನಾ ಹೆಲಿಕಾಪ್ಟರ್ ಮತ್ತು ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ನಿರ್ವಹಿಸಿದ ಕಾರ್ಯಗಳನ್ನು ವಿವರಿಸಿದರು ಹಾಗೂ ಜಿಲ್ಲೆಯಲ್ಲಿ ಹೆಚ್ಚು ಹಾನಿ ದೇವದುರ್ಗ ತಾಲೂಕಿನಲ್ಲಿ ಆಗಿರುವ ಕುರಿತು ಕಾರ್ಯದರ್ಶಿಗಳ ಗಮನಕ್ಕೆ ತಂದರು.

ಕೃಷಿ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಪ್ರವಾಹ ಸಂದರ್ಭದಲ್ಲಿ ತೆಗೆದುಕೊಂಡ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ಅಪರ ಮುಖ್ಯ ಕಾರ್ಯದರ್ಶಿಗಳು ಪಡೆದುಕೊಂಡರು.

ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶರತ್. ಬಿ ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Intro:ಪ್ರವಾಹ ‌ಪೀಡಿತರಿಗೆ ಬೇಗನೆ ಪರಿಹಾರ ವಿತರಿಸಿ- ಜಾವೇದ ಅಕ್ತರ್.
ರಾಯಚೂರು ಆ17
ಕ್ರಷ್ಣ ನದಿ ಪ್ರವಾಹ ಪೀಡಿತರಿಗೆ ಆದಷ್ಟು ಬೇಗನೆ ಪರಿಹಾರ ವಿತರಿಸಿ ಅವರು ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡಿರುತ್ತಾರೆ ನೇರವಾಗಿ ಅವರ ಖಾತೆಗೆ ಹಣವನ್ನು ಹಾಕಿ ಎಂದು ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ ಆಕ್ತರ್ ಹೇಳಿದರು.
Body:ಅವರು ಇಂದು ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಪ್ರವಾಹ ಪರಿಸ್ಥಿತಿ ಕುರಿತು ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೨೦೦ ಜನರಿರುವ ಕಡೆ ೨೪ ಗಂಟೆಗಳು ಅವರಿಗೆ ಆರೋಗ್ಯ ಸೇವೆ ನೀಡಬೇಕು. ಶುದ್ದ ಕುಡುಯುವ ನೀರು ಅವರಿಗೆ ಒದಗಿಸಬೇಕು. ಸೊಳ್ಳೆ ಗಳನ್ನು ಹರಡದಂತೆ ನೊಡಿಕೊಳಬೆಕು ಮತ್ತು ಆಗಾಗ ಅವರಿಗೆ ಆರೋಗ್ಯ ವನ್ನು ಪರೀಕ್ಷೆ ಮಾಡುತ್ತಿರಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಶರತ್.ಬಿ ಅವರು ಪ್ರವಾಹ ರಕ್ಷಣಾ ಕಾರ್ಯದಲ್ಲಿ ಭಾರತೀಯ ಸೇನೆಯ ೧೦೨ ಜನ. NDRF ನ ೪೫ ಜನ ಸಿಬ್ಬಂದಿಗಳು ಹಾಗೂ ಒಂದು ಸೇನಾ ಹೆಲಿಕಾಪ್ಟರ್ ಮತ್ತು ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಪ್ರವಾಹ ಸಂಧರ್ಬದಲ್ಲಿ ಅವರು ನಿರ್ವಹಿಸುತ್ತಿರುವ ಕಾರ್ಯಗಳನ್ನು ವಿವರಿಸಿದರು ಹಾಗೂ ಜಿಲ್ಲೆಯಲ್ಲಿ ಹೆಚ್ಚು ಹಾನಿ ದೇವದುರ್ಗ ತಾಲ್ಲೂಕಿನಲ್ಲಿ ಆಗಿರುವ ಕುರಿತು ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಅಪರ ಮುಖ್ಯ ಕಾರ್ಯದರ್ಶಿಗಳು ಕ್ರುಷಿ ಇಲಾಖೆ. ಆರೋಗ್ಯ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಪ್ರವಾಹ ಸಂಧರ್ಬದಲ್ಲಿ ಅವರು ತೆಗೆದುಕೊಂಡ ಕ್ರಮಗಳ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶರತ್. ಬಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ರೆಡ್ಡಿ. ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.