ರಾಯಚೂರು: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಂಪುಟದಲ್ಲಿ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕರಿಗೆ ಸಚಿವ ಸ್ಥಾನ ನೀಡಬೇಕೆಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದರು. ಜಿಲ್ಲೆಯ ದೇವದುರ್ಗ ಪಟ್ಟಣದ ತನ್ನೂರು ಮಠದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರ.
ಈ ಸಚಿವ ಸಂಪುಟದಲ್ಲಿ ಕೆ.ಶಿವನಗೌಡ ನಾಯಕರಿಗೆ ಸಚಿವ ಸ್ಥಾನ ನೀಡಬೇಕು. ಯುವಕರಿಗೆ, ಉತ್ತಮವಾಗಿ ಕೆಲಸ ಮಾಡುವವರಿಗೆ ಅವಕಾಶ ಕೊಡಬೇಕು. ಇದರಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಬೇಗ ಆಗುತ್ತವೆ. ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರಕ್ಕೆ ಸೂಚನೆ ನೀಡಲು ಹಾರೈಸುತ್ತಿದ್ದು, ಸದ್ಯಕ್ಕೆ ನಿಗಮದ ಅಧ್ಯಕ್ಷರಾಗಿರುವ ಇವರು ಮುಂದಿನ ದಿನಗಳಲ್ಲಿ ಸಚಿವರಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ: ಬಾಗಿಲು ತೆರೆದ ಸುಪ್ರಸಿದ್ಧ ಕೇದಾರನಾಥ; ಭಕ್ತಾದಿಗಳ ದರ್ಶನಕ್ಕೆ ಮುಕ್ತ