ರಾಯಚೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಗರದ ಗಾಂಧಿ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯಪಾಲರು ದೇಗುಲಕ್ಕೆ ಆಗಮಿಸುತ್ತಿದ್ದಂತೆ ಅರ್ಚಕರು ಕಂಚಿ ಮೇಳದೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ಬಳಿಕ ಆಂಜನೇಯ ಸ್ವಾಮಿಗೆ ಅರ್ಚಕರ ಮಂತ್ರ ಘೋಷಗಳೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ದೇವಾಲಯದಿಂದ ರಾಜ್ಯಪಾಲರನ್ನು ಸನ್ಮಾನಿಸಲಾಯಿತು. ಈ ವೇಳೆ ನಗರಸಭೆ ಅಧ್ಯಕ್ಷ ಈ.ವಿನಯ ಕುಮಾರ್ ಸೇರಿದಂತೆ ಇತರರು ಇದ್ದರು.
ರಾಜ್ಯಪಾಲರ ಆಗಮನದ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ರಾಜ್ಯಪಾಲರು ಆಗಮಿಸುವ ಮತ್ತು ತೆರಳುವ ರಸ್ತೆಯಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿತ್ತು. ಹೀಗಾಗಿ ಬಸವೇಶ್ವರ ಸರ್ಕಲ್‌ನಿಂದ ಚಂದ್ರಮೌಳೇಶ್ವರ ಕಡೆ ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು. ಇದರಿಂದಾಗಿ ಬಸವೇಶ್ವರ ಸರ್ಕಲ್ ಬಳಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿ ಬೆಳಗ್ಗೆ ಶಾಲೆಗೆ ತೆರಳುವ ವಿದ್ಯಾರ್ಥಿಗಳು, ಕೆಲಸ ತೆರಳುವವರು ಹಾಗು ವಾಹನ ಸವಾರರು ಪರದಾಡುವಂತಾಗಿತ್ತು.
ಇದನ್ನೂ ಓದಿ: ನಾಂದೇಡ್ ಹೋಟೆಲ್ನಲ್ಲಿ ಅಗ್ನಿ ಅವಘಡ : ಭಾರಿ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ