ರಾಯಚೂರು: ಗ್ರಾಮ ಪಂಚಾಯತಿ ಅಧ್ಯಕ್ಷೆ ನಡುರಸ್ತೆಯಲ್ಲಿಯೇ ಸಾರ್ವಜನಿಕರಿಗೆ ಚಪ್ಪಲಿಯಿಂದ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಜಿಲ್ಲೆಯ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ಕೇಳಿಬಂದಿದೆ.
ಪಂಚಾಯ್ತಿ ವ್ಯಾಪ್ತಿಯ ಕಸ ವಿಲೇವಾರಿ ವಾಹನದ ಕೀ ತೆಗೆದುಕೊಂಡು ತನ್ನ ಅಳಿಯನನ್ನೇ ಚಾಲಕನನ್ನಾಗಿ ನೇಮಿಸಿಕೊಂಡಿದ್ದಾರೆ. ಈ ಬಗ್ಗೆ ಗ್ರಾಮದ ಬಸವರಾಜ ಹಾಗೂ ಕೆಲ ಗ್ರಾಮ ಪಂಚಾಯ್ತಿ ಸದಸ್ಯರು ಅಧ್ಯಕ್ಷೆಯನ್ನು ಪ್ರಶ್ನೆ ಮಾಡಿದ್ದಾರೆ.
ಇದರಿಂದ ಕೋಪಗೊಂಡ ಅಧ್ಯಕ್ಷೆ, ನಡುರಸ್ತೆಯಲ್ಲೇ ಸಾರ್ವಜನಿಕರು ಹಾಗೂ ಸದಸ್ಯರ ಮೇಲೆ ಹಲ್ಲೆ ಮಾಡಲು ಮುಂದಾದರು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಮೃತರ ಹೆಸರಲ್ಲಿ ಜಾಬ್ ಕಾರ್ಡ್ ಮಾಡಿ ಹಣ ಹೊಡೆಯುತ್ತಿದ್ದ ಪಿಡಿಒ ಅಮಾನತು