ETV Bharat / state

ರಾಜ್ಯ ಸರ್ಕಾರಕ್ಕೆ ವಿವಿಧ ಬೇಡಿಕೆ ಇಟ್ಟು ಆಶಾ ಕಾರ್ಯಕರ್ತೆಯರು ಮುಷ್ಕರ

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 12,000 ರೂ. ವೇತನ ನೀಡಬೇಕು. ಇತರೆ ಇಲಾಖೆಗಳ ಕೆಲಸಕ್ಕೆ ಬಳಸಿಕೊಂಡಾಗ ಪ್ರತ್ಯೇಕ ಸಂಬಳ ಕೊಡಬೇಕು. ಕೊರೊನಾ ಕೆಲಸದಲ್ಲಿ ತೊಡಗಿಸಿಕೊಂಡವರಿಗೆ ವಿಶೇಷ ಪ್ಯಾಕೇಜ್​​ ಜೊತೆಗೆ ಅಗತ್ಯ ವೈದ್ಯಕೀಯ ಕಿಟ್ ನೀಡುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

Health service shutdown from July 10 if government didn't fulfill our demand
ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜು.10ರಿಂದ ಆರೋಗ್ಯ ಸೇವೆ ಸ್ಥಗಿತ: ಆಶಾ ಕಾರ್ಯಕರ್ತರ ಎಚ್ಚರಿಕೆ
author img

By

Published : Jul 1, 2020, 12:45 AM IST

ಲಿಂಗಸುಗೂರು (ರಾಯಚೂರು): ರಾಜ್ಯವ್ಯಾಪಿ ಆರೋಗ್ಯ ಸೇವೆಗಳ ಜೊತೆಗೆ ಇತರೆ ಇಲಾಖೆಗಳ ಕೆಲಸ ಕಾರ್ಯಗಳಲ್ಲಿ ಬಳಸಿಕೊಳ್ಳುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೇ ಜುಲೈ 10ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸುವುದಾಗಿ ಹೇಳಿದ್ದಾರೆ.

ಲಿಂಗಸುಗೂರಲ್ಲಿ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿ ಮನವಿ ಪತ್ರ ಸಲ್ಲಿಸಿದರು.

ಈಗಾಗಲೇ ಹಲವು ಬಾರಿ ಹೋರಾಟ ನಡೆಸಿ ಮನವಿ ಸಲ್ಲಿಸಿದ್ದರೂ ಬೇಡಿಕೆಗಳು ಈಡೇರಿಸಿಲ್ಲ. ಗೌರವಧನ, ಪ್ರೋತ್ಸಾಹಧನದಂತಹ ಬಿಡಿ ಬಿಡಿ ವೇತನ ನೀಡುತ್ತಿರುವುದನ್ನು ನಿಲ್ಲಿಸಿ ನಿಶ್ಚಿತ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ 12,000 ರೂ. ವೇತನ ನೀಡಬೇಕು. ಇತರೆ ಇಲಾಖೆಗಳ ಕೆಲಸಕ್ಕೆ ಬಳಸಿಕೊಂಡಾಗ ಪ್ರತ್ಯೇಕ ವೇತನ ಕೊಡಬೇಕು. ಕೊರೊನಾ ಕೆಲಸದಲ್ಲಿ ತೊಡಗಿಸಿಕೊಂಡವರಿಗೆ ವಿಶೇಷ ಪ್ಯಾಕೇಜ್​​ ಜೊತೆಗೆ ಅಗತ್ಯ ವೈದ್ಯಕೀಯ ಕಿಟ್ ನೀಡುವಂತೆ ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.