ETV Bharat / state

ಅಗತ್ಯ ವಸ್ತುಗಳ ಖರೀದಿಗೆ ರಾಯಚೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ - ರಾಯಚೂರಿನ ಲಾಕ್​​ ಡೌನ್​

ಲಾಕ್​​ಡೌನ್​ ಹಿನ್ನೆಲೆ ರಾಯಚೂರಿನಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲು ಜನ ಮಾರುಕಟ್ಟೆಯಲ್ಲಿ ಮುಗಿಬಿದ್ದಿರುವುದು ಕಂಡು ಬಂತು.

Heavy crowd in Raichuru Market
ಮಾರುಕಟ್ಟೆಗಳಲ್ಲಿ ಜನ ಜಾತ್ರೆ ಕಂಡು ಬಂತು
author img

By

Published : May 19, 2021, 11:37 AM IST

ರಾಯಚೂರು: ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಘೋಷಿಸಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಲಾಕ್​ಡೌನ್ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಇದರಿಂದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಕಂಡು ಬಂತು. ವಸ್ತುಗಳ ಖರೀದಿ ಭರಾಟೆಯಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಕೆಲವರು ಮಾಸ್ಕ್​ ಕೂಡ ಧರಿಸದೆ ಓಡಾಡುತ್ತಿರುವುದು ಕಂಡು ಬಂತು. ಜನರ ಸಂಖ್ಯೆ ಹೆಚ್ಚಿದ್ದರಿಂದ ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಮಾರುಕಟ್ಟೆಗಳಲ್ಲಿ ಜನಜಾತ್ರೆ

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ ಮೂರು ದಿನಗಳ ಸಂಪೂರ್ಣ ಲಾಕ್​ಡೌನ್​ಗೆ ಜಿಲ್ಲಾಡಳಿತ ನಿರ್ಧರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.