ರಾಯಚೂರು: ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ಇಡಪನೂರು ಗ್ರಾಮದ ಸೇತುವೆ ಕೊಚ್ಚಿಹೋಗಿದೆ.
ಮಳೆಯಿಂದಾಗಿ ಇಡಪನೂರು ಹಳ್ಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ತುಂಬಿದ್ದು, ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ನೀರಿನ ರಭಸಕ್ಕೆ ಕೊಚ್ಚಿಹೋಗಿದೆ. ಸೇತುವೆ ಕೊಚ್ಚಿ ಹೋಗಿದ್ದರಿಂದ ಇಡಪನೂರಿನಿಂದ ರಾಯಚೂರಿಗೆ ಸಂಪರ್ಕ ಬಂದ್ ಆಗಿದೆ. ಇದರಿಂದಾಗಿ ಗ್ರಾಮಸ್ಥರು ರಾಯಚೂರಿಗೆ ತೆರಳಲು 20 ಕಿ.ಮೀ. ಸುತ್ತು ಹಾಕಿ ಬರಬೇಕಾದ ಅನಿವಾರ್ಯತೆ ಎದುರಾಗಿದೆ.