ರಾಯಚೂರು: ನಿನ್ನೆ ಲಿಂಗಸೂಗೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದ್ದು, ಸಿಡಿಲು ಬಡಿದು ಜಾನುವಾರುಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡದಲ್ಲಿ ಮೂರು ಜಾನುವಾರುಗಳು ಸಿಡಿಲಿಗೆ ಬಲಿಯಾಗಿವೆ. ದುರ್ಗಪ್ಪ ಕಂಠೆಪ್ಪ ರಾಮರಟ್ಟಿ ಎಂಬುವವರಿಗೆ ಸೇರಿದ ಜಾನುವಾರುಗಳು ಎಂದು ಗುರುತಿಸಲಾಗಿದೆ. ಮೃತ ಜಾನುವಾರುಗಳಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಮಾಲೀಕರು ಅಳಲು ತೋಡಿಕೊಂಡರು.