ರಾಯಚೂರು: ರಾಜ್ಯದಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಈ ವೇಳೆ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬಂದಿರುವುದು ದಾಖಲಾಗಿದೆ.
ರಾಯಚೂರು ತಾಲೂಕಿನ ಕಲ್ಮಲಾ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ ವರದಿ ತಿಳಿಸಿದೆ.
ಇಡೀ ರಾಜ್ಯದ ಸುರಿದ ಮಳೆಗಿಂತಲೂ ಕಲ್ಮಲಾ ಗ್ರಾಮದಲ್ಲಿ 148.5 MM ಮಳೆಯಾಗಿರುವುದು ದಾಖಲಾಗಿದೆ. ಕಲ್ಮಲಾ ಸೇರಿದಂತೆ ಜಿಲ್ಲೆಯಾದ್ಯಂತ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ತಗ್ಗು ಇರುವ ಪ್ರದೇಶಗಳಿಗೆ ನೀರು ನುಗ್ಗಿದೆ. ಗ್ರಾಮದಲ್ಲಿ ರಸ್ತೆಗಳು ಕೆಸರು ಗದ್ದೆಯಂತೆಯಾಗಿದ್ದು, ಜಮೀನುಗಳ ಬದುಗಳು ಒಡೆದಿವೆ. ಭಾರೀ ಪ್ರಮಾಣದ ಮಣ್ಣು ನೀರಿನೊಂದಿಗೆ ಕೊಚ್ಚಿ ಹೋಗಿದೆ.
ಇನ್ನು ನಿನ್ನೆ ಸುರಿದ ಈ ಮಳೆ ರೈತರಲ್ಲಿ ಮೊಗದಲ್ಲಿ ಸಂತಸ ತಂದಿದ್ದು, ಕೃಷಿ ಚಟುವಟಿಕೆಗೆ ಅನುಕೂಲವಾಗಿದೆ. ಬೇಸಿಗೆ ಹಿನ್ನೆಲೆ ಜಿಲ್ಲೆಯಲ್ಲಿ ಸುಮಾರು 43 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗುವ ರಣ ಬಿಸಿಲಿನಿಂದ, ಜಿಲ್ಲೆಯ ಜನತೆ ಹೈರಾಣಾಗಿದ್ರು. ಸದ್ಯ ರಾಜ್ಯದಲ್ಲಿ ಅತಿಹೆಚ್ಚು ಮಳೆ ಸುರಿದ ಹಿನ್ನೆಲೆ ಬಿಸಿಲಿಗೆ ಕಾದು ಕೆಂಡದಂತಾಗಿದ್ದ ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ.