ETV Bharat / state

ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ: ರಾಯಚೂರಿನ 17 ಗ್ರಾಮಗಳಲ್ಲಿ ಆತಂಕ - raichur flood news

ಇಂದು ಬೆಳಗ್ಗೆ 9:10ಕ್ಕೆ ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್​​​ನಿಂದ 4 ಲಕ್ಷ ಕ್ಯೂಸೆಕ್‌ ನೀರನ್ನು ಹರಿಸಲಾಗಿದ್ದು, ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ.

Raichur: Flood anxiety  in Krishna River
ಮಹಾಮಳೆ: ಕೃಷ್ಣ ನದಿಯಲ್ಲಿ ಪ್ರವಾಹ ಭೀತಿ!
author img

By

Published : Oct 20, 2020, 1:11 PM IST

ರಾಯಚೂರು: ಮಹಾಮಳೆಯಿಂದಾಗಿ ಭೀಮಾ ನದಿಗೆ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್​​​ನಿಂದ 4 ಲಕ್ಷ ಕ್ಯೂಸೆಕ್‌ ನೀರನ್ನು ಹರಿಬಿಡಲಾಗಿದೆ. ಇದರಿಂದ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ರಾಯಚೂರಿನ 17 ಗ್ರಾಮಗಳಿಗೆ ಪ್ರವಾಹ ಭೀತಿ

ಭೀಮಾ ನದಿಯಿಂದ ಹರಿದು ಬರುವ ನೀರು ರಾಯಚೂರು ತಾಲೂಕಿನ ಕಾಡ್ಲೂರು ಗ್ರಾಮದ ಬಳಿ ನದಿ ತೀರದಲ್ಲಿ ಸಂಗಮವಾಗಲಿದೆ. ಇದರಿಂದಾಗಿ ಕೃಷ್ಣ ನದಿಗೆ ಪ್ರವಾಹ ಭೀತಿ ಎದುರಾಗಿದೆ. ಇಂದು 9:10ಕ್ಕೆ ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್​​​ನಿಂದ 4 ಲಕ್ಷ ಕ್ಯೂಸೆಕ್‌ ನೀರು ಹರಿಸಲಾಗಿದೆ. ಹೀಗಾಗಿ ರಾಯಚೂರು ತಾಲೂಕಿನ 17 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಈಗಾಗಲೇ ಹೊಲಗಳಿಗೆ ನೀರು ನುಗ್ಗಿ ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದು ನಿಂತ ಭತ್ತದ ಪೈರುಗಳು ಹಾಳಾಗಿವೆ. ನದಿಗೆ ಅಳವಡಿಸಿರುವ ಕೆಲ ರೈತರ ಪಂಪ್‌ಸೆಟ್‌ಗಳು, ಪೈಪ್‌ಗಳು ನೀರು ಪಾಲಾಗಿವೆ ಎಂದು ಹೇಳಲಾಗುತ್ತಿದೆ.

ಕೃಷ್ಣಾ ನದಿಗೆ ನೀರು ಹರಿದು ಬರುತ್ತಿರುವುದರಿಂದ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.