ರಾಯಚೂರು: ಇಂದು ನಗರದಲ್ಲಿ ವ್ಯಾಪಾರ-ವಹಿವಾಟು ಜೋರಾಗಿ ನಡೆದಿದ್ದು, ಜನರು ಮಾರುಕಟ್ಟೆಗೆ ಮುಗಿಬಿದ್ದಿದ್ದಾರೆ.
ನಾಳೆ ಜಿಲ್ಲೆ ಸಂಪೂರ್ಣ ಬಂದ್ ಆಗಿಲಿದ್ದು, ಈ ಹಿನ್ನೆಲೆಯಲ್ಲಿ ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಯಲ್ಲಿ ಜಮಾಯಿಸಿದ್ದರು.
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಎಂದಿನಂತೆ ಹೆಚ್ಚಿನ ಮಟ್ಟದಲ್ಲಿ ಜನಸಂದಣಿ ಕಂಡು ಬಂದಿದೆ. ವ್ಯಾಪಾರ ವಹಿವಾಟು ವೇಳೆ ಸಾಮಾಜಿಕ ಅಂತರ ಪಾಲನೆ ಮಾಡಬೇಕಾದ ಜನರು ಮೈ ಮರೆತು ಓಡಾಡುತ್ತಿದ್ದರು. ಕೆಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿ ಜನರು ಪರದಾಡುವಂತಾಗಿತ್ತು.