ರಾಯಚೂರು: ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಪ್ರಯುಕ್ತ ರಾಯಚೂರಿನಲ್ಲಿ ಇಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಮೆಟ್ ಹಾಗೂ ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಜಾಥಾ ನಡೆಯಿತು.
ಜಾಥಾ ಮೂಲಕ ಟ್ರಾಫಿಕ್ ನಿಯಮಗಳ ಬಗ್ಗೆ ಪಾಠ ಹೇಳಲು ರಾಯಚೂರು ಪೊಲೀಸರು ಮುಂದಾಗಿದ್ದಾರೆ. ನಗರದ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಎಸ್ಪಿ ಸಿ.ಬಿ.ವೇದಮೂರ್ತಿ, ಮಿಸೈಲ್ ಮ್ಯಾನ್ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಜಾಥಾಗೆ ಚಾಲನೆ ನೀಡಿದರು. ಅಂಬೇಡ್ಕರ್ ವೃತ್ತದ ಮೂಲಕ ಆರಂಭವಾದ ಜಾಥಾ ಏಕ್ ಮಿನಾರ್ ರಸ್ತೆ, ತಿನ್ ಖಂದಿಲ್, ಮಹಾವೀರ್ ಸರ್ಕಲ್, ಚಂದ್ರಮೌಲೇಶ್ವರ ವೃತ್ತ, ಗಂಜ್ ರಸ್ತೆ ಮೂಲಕ ಜಿಲ್ಲಾ ಪೊಲೀಸ್ ಕವಾಯತು ಮೈದಾನದವರೆಗೆ ನಡೆಯಿತು.
