ETV Bharat / state

ಹೋಮ್​ ಕ್ವಾರಂಟೈನ್​​ನಲ್ಲಿದ್ದ ಕೊರೊನಾ ಶಂಕಿತ ವ್ಯಕ್ತಿ ನಾಪತ್ತೆ! - ಹೋಮ್ ಕ್ವಾರಂಟೈನ್ ವ್ಯಕ್ತಿ ಎಸ್ಕೇಪ್​​

ದೆಹಲಿಯ ನಿಜಾಮುದ್ದೀನ್ ಸಭೆಗೆ ತೆರಳಿ ವಾಪಸಾಗಿ ಹೋಮ್​ ಕ್ವಾರಂಟೈನ್​​ನಲ್ಲಿದ್ದ ಕೊರೊನಾ ಶಂಕಿತ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

home_quarantine corona suspected missing
ಹೋಮ್ ಕ್ವಾರಂಟೈನ್​​ನಲ್ಲಿದ್ದ ಕೊರೊನಾ ಶಂಕಿತ ವ್ಯಕ್ತಿ ನಾಪತ್ತೆ
author img

By

Published : Apr 7, 2020, 7:47 PM IST

ರಾಯಚೂರು: ಹೋಮ್ ಕ್ವಾರಂಟೈನಲ್ಲಿದ್ದ ವ್ಯಕ್ತಿಯೋರ್ವ ಮನೆಯಿಂದ ತಪ್ಪಿಸಿಕೊಂಡು ಹೋಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಶಂಕಿತ ಕೊರೊನಾ ವ್ಯಕ್ತಿಯನ್ನ ಹೋಮ್ ಕ್ವಾರಂಟೈನ್​ನಲ್ಲಿ ಇರಿಸುವ ಮೂಲಕ ನಿಗಾ ವಹಿಸಲಾಗಿತ್ತು. ಆದ್ರೆ ಈ ಶಂಕಿತ ವ್ಯಕ್ತಿ ಮನೆಯ ಬೀಗ ಹಾಕಿ ಮನೆಯಿಂದ ತಪ್ಪಿಸಿಕೊಂಡು ಹೋಗಿದ್ದು, ಇವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಈ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ಸಭೆಗೆ ಹೋಗಿ ಬಂದಿದ್ದ. ಈ ಹಿನ್ನೆಲೆ ಜಿಲ್ಲಾಡಳಿತದಿಂದ ವ್ಯಕ್ತಿಯ ಆರೋಗ್ಯ ತಪಾಸಣೆ ಮಾಡುವ ಮೂಲಕ ಹೋಮ್ ಕ್ವಾರಂಟೈನ್​​ ಮಾಡಲಾಗಿತ್ತು. ಆದ್ರೆ ಈಗ ವ್ಯಕ್ತಿ ನಾಪತ್ತೆಯಾಗಿರುವುದು ಜಿಲ್ಲೆಯ ಜನತೆಗೆ ಆತಂಕ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.