ರಾಯಚೂರು: ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ಲಕ್ಷಾಂತರ ಕ್ಯೂಸೆಕ್ ನೀರು ಹರಿಬಿಟ್ಟ ಪರಿಣಾಮ ರಾಯಚೂರು - ಕಲಬುರಗಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಹೂವಿನಹೆಡಗಿ ಸೇತುವೆ ಮೇಲೆ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಹೂವಿನಹೆಡಗಿ ಗ್ರಾಮದ ಸೇತುವೆ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇರುವ ಹಿನ್ನೆಲೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರಿ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದ್ದು, ಸಾರ್ವಜನಿಕರಿಗೂ ಸಹ ಮುನ್ಸೂಚನೆ ನೀಡಲಾಗಿದೆ.
ನಾರಾಯಣಪುರ ಜಲಾಯಶಯದಿಂದ ಬೆಳಗ್ಗೆ 10 ಗಂಟೆಯಿಂದ 20 ಗೇಟ್‌ಗಳ ಮೂಲಕ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿ ಬಿಡಲಾಗಿದೆ.