ರಾಯಚೂರು: ಲಿಂಗಸುಗೂರು ಪುರಸಭೆ ವ್ಯಾಪ್ತಿಯ ವಾರ್ಡ್ಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಹೈಪೋಕ್ಲೊರೈಟ್ ರಾಸಾಯನಿಕ ಮಿಶ್ರಣವನ್ನು ಸಿಂಪಡಣೆ ಮಾಡುವ ಕಾರ್ಯ ಭರದಿಂದ ಸಾಗುತ್ತಿದೆ.
ಪುರಸಭೆ ವ್ಯಾಪ್ತಿಯ ಕರಡಕಲ್ಲ, ಲಿಂಗಸುಗೂರು, ಕಸಬಾ ಲಿಂಗಸುಗೂರು ವಾರ್ಡ್ಗಳಲ್ಲಿ ರಾಸಾಯನಿಕ ಸಿಂಪಡಣೆ ಕಾರ್ಯ ಶನಿವಾರದಿಂದ ಆರಂಭಗೊಂಡಿದೆ. ಕೊರೊನಾ ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ನೈರ್ಮಲ್ಯಧಿಕಾರಿ ರಾಘವೇಂದ್ರ ತಿಳಿಸಿದರು.
ಸಾರ್ವಜನಿಕರು ಹೇಳುವುದೇನು?
ರಾಸಾಯನಿಕ ಸಿಂಪಡಣೆ ಮಾಡಿದರೆ ಸಾಲದು, ಬಹುತೇಕ ವಾರ್ಡ್ಗಳಲ್ಲಿ ಚರಂಡಿಗಳು ತುಂಬಿವೆ. ಕಸಕಡ್ಡಿ ಎಲ್ಲೆಂದರಲ್ಲಿ ಬಿದ್ದು ದುರ್ನಾತ ಬೀರುತ್ತಿದೆ. ಇದ್ರ ಸ್ವಚ್ಚತೆಗೂ ಪುರಸಭೆ ಮುಂದಾಗಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.