ರಾಯಚೂರು: ಅಕ್ರಮವಾಗಿ ಬೆಳೆದಿದ್ದ ಗಾಂಜಾವನ್ನ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲೆಯ ಸಿಂಧನೂರು ತಾಲೂಕಿನ ಸೋಮಲಾಪುರ ಗ್ರಾಮದಲ್ಲಿ ರಡ್ಡೆಪ್ಪ ಎನ್ನುವ ವ್ಯಕ್ತಿ ತನ್ನ ಮನೆಯ ಸುತ್ತಮುತ್ತಲು ಗಾಂಜಾ ಗಿಡಗಳನ್ನ ಬೆಳೆಯುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಸಾವಿರಾರು ರೂಪಾಯಿ ಮೌಲ್ಯದ 22.923 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಸಿಪಿಐ ಚಂದ್ರಶೇಖರ ಮಾರ್ಗದರ್ಶನದಲ್ಲಿ ಪಿಎಸ್‌ಐ ಜಿ.ಎಸ್.ರಾಘವೇಂದ್ರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನ ಬಂಧಿಸಿದ್ದಾರೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.