ETV Bharat / state

ರಾಯಚೂರು ಕೋರ್ಟ್​ ಕಾಂಪೌಂಡ್​ ಕೆಲಸಕ್ಕೆ ಚಾಲನೆ: ಶೀಘ್ರದಲ್ಲೇ ತಲೆ ಎತ್ತಲಿದೆ ಜಿಲ್ಲಾ ನ್ಯಾಯಾಲಯ - raichur court news

ನಗರದ ಜಿಲ್ಲಾ ಹಳೆ ಸರ್ಕಾರಿ ಆಸ್ಪತ್ರೆಯ ಸಮಿಪದಲ್ಲಿ ನ್ಯಾಯಾಲಯ ನಿರ್ಮಾಣಕ್ಕೆ ಮಂಜೂರಾಗಿರುವ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿತು.

Court Compound Construction
ಕೋರ್ಟ್​ ಕಾಂಪೌಂಡ್​ ನಿರ್ಮಾಣಕ್ಕೆ ಚಾಲನೆ
author img

By

Published : Jun 23, 2020, 12:34 PM IST

ರಾಯಚೂರು : ಜಿಲ್ಲಾ ನೂತನ ನ್ಯಾಯಾಲಯದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ನ್ಯಾಯಾಧೀಶ ಬೈಲೂರು ಶಂಕರರಾಮ್ ಹಾಗೂ ಶಾಸಕ ಡಾ.ಶಿವರಾಜ್ ಪಾಟೀಲ್ ಚಾಲನೆ ನೀಡಿದರು.

ಈ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಹಳೆ ಸರ್ಕಾರಿ ಆಸ್ಪತ್ರೆಯ ಸಮಿಪದಲ್ಲಿ ನ್ಯಾಯಾಲಯ ನಿರ್ಮಾಣಕ್ಕೆ ಮಂಜೂರಾಗಿರುವ ಸ್ಥಳದಲ್ಲಿ ಭೂಮಿ ಪೂಜೆ ನೆರವೇರಿತು.

ಜಿಲ್ಲೆಯಲ್ಲಿ ನೂತನ ನ್ಯಾಯಾಲಯ ಸ್ಥಾಪಿಸಲು ಈಗಾಗಲೇ ಸ್ಥಳ ಗುರುತಿಸಲಾಗಿದೆ. ಆದ್ರೆ, ತಾಂತ್ರಿಕ ಸಮಸ್ಯೆಯಿಂದಾಗಿ ಕಟ್ಟಡ ನಿರ್ಮಾಣ ಕಾರ್ಯ ವಿಳಂಬವಾಗಿತ್ತು. ಮುಂಬರುವ ದಿನಗಳಲ್ಲಿ ಕಟ್ಟಡ ಕಾಮಗಾರಿ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಈ ಕಾಮಗಾರಿಗಾಗಿ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಕಾಂಪೌಂಡ್ ನಿರ್ಮಾಣದ ಕೆಲಸ ಶುರುವಾಗಿದೆ ಎಂದರು.

ಕೋರ್ಟ್​ ಕಾಂಪೌಂಡ್​ ನಿರ್ಮಾಣಕ್ಕೆ ಭೂಮಿ ಪೂಜೆ

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡುವಂತೆ ಸೂಚನೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನಿಯಮಗಳಂತೆ ಸುಸಜ್ಜಿತ ನ್ಯಾಯಾಲಯ ಸ್ಥಾಪನೆಗೆ ಶ್ರಮಿಸುವುದಾಗಿ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.