ETV Bharat / state

ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುತ್ತಿರುವ ಪ್ರವಾಹ ಭೀತಿ: ಹೈ ಅಲರ್ಟ್‌ ಘೋಷಿಸಿದ ಜಿಲ್ಲಾಡಳಿತ

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿ ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆಯ ಕೃಷ್ಣಾ ನದಿಯ ದಡದಲ್ಲಿ ಪ್ರವಾಹದ ಭೀತಿ ಹೆಚ್ಚಳವಾಗುತ್ತಿದೆ. ಜೊತೆಗೆ ಸಂಜೆಯ ವೇಳೆಗೆ ಕಲಬುರಗಿ-ರಾಯಚೂರು ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುತ್ತಿರುವ ಪ್ರವಾಹ ಭೀತಿ
author img

By

Published : Aug 3, 2019, 7:25 PM IST

ರಾಯಚೂರು : ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿ ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆಯ ಕೃಷ್ಣಾ ನದಿಯ ದಡದಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚುತ್ತಿರುವ ಪ್ರವಾಹ ಭೀತಿ

ಈಗಾಗಲೇ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಗ್ರಾಮದ ಬಳಿಯ ಸೇತುವೆ ಸಂಪೂರ್ಣವಾಗಿ ಜಲಾವೃತ್ತಗೊಂಡಿದ್ದು, ಇದೀಗ ಯರಗೋಡಿ ಗ್ರಾಮದ ಸೇತುವೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದಲ್ಲಿನ ಗ್ರಾಮಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ನದಿಗೆ ತೆರಳದಂತೆ ಮಾಹಿತಿ ನೀಡಲಾಗುತ್ತಿದೆ.

ಸಂಜೆಯ ವೇಳೆಗೆ ಕಲಬುರಗಿ-ರಾಯಚೂರು ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ದಿನ ದಿನಕ್ಕೆ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗುವುದರ ಜೊತೆ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಸಹ ಮುಂಜಾಗ್ರತಾ ಕ್ರಮ ಕೈಗೊಂಡು ಹೈ ಅಲರ್ಟ್ ಘೋಷಣೆ ಮಾಡಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಸಮೀಪದ ನಾಲೆಯಲ್ಲಿ ಒಡಕು ಉಂಟಾಗಿದ್ದು, ರೈತರ ಜಮೀನಿಗೆ‌ ನೀರು ನುಗ್ಗುತ್ತಿದೆ. ಈ ಕುರಿತು ನೀರಾವರಿ ಅಧಿಕಾರಿಗಳ ಗಮನಕ್ಕೆ ತಂದರೂ, ಅಧಿಕಾರಿಗಳು ಮಾತ್ರ ಗಮನಹರಿಸುತ್ತಿಲ್ಲವೆಂದು ಅಧಿಕಾರಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಸ್ಲಗ್: ಹೆಚ್ಚಿದ ಪ್ರವಾಹ ಭೀತಿ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ‌ಸ್ವಾಮಿ
ದಿನಾಂಕ: ೦೩-೦೮-೨೦೧೯
ಸ್ಥಳ: ರಾಯಚೂರು

ಆಂಕರ್: ನಾರಾಯಣಪುರ ಜಲಾಶಯದಿಂದ ಕೃಷ್ಣ ನದಿಗೆ ಹೆಚ್ಚಿನ ನೀರು ಹರಿದು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆಯ ಕೃಷ್ಣ ನದಿಯ ದಡದಲ್ಲಿ ಪ್ರವಾಹ ಭೀತಿ ಹೆಚ್ಚಳವಾಗುತ್ತಿದೆ.Body:ಈಗಾಗಲೇ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಗ್ರಾಮದ ಬಳಿ ಸೇತುವೆ ಸಂಪೂರ್ಣವಾಗಿ ಜಲಾವೃತ್ತಗೊಂಡ, ಇದೀಗ ಯರಗೋಡಿ ಗ್ರಾಮದ ಸೇತುವೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ ನದಿ ಪಾತ್ರದಲ್ಲಿನ ಗ್ರಾಮಗಳಿಗೆ ಮುನ್ನೆಚ್ಚರಿಕೆ ಗ್ರಾಮವಾಗಿ ನದಿಗೆ ತೆರಳದಂತೆ ಡಂಗೋರ ಸಾರುವ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಇನ್ನು ಸಂಜೆಯ ವೇಳೆಗೆ ಕಲಬುರಗಿ-ರಾಯಚೂರು ಸಂಪರ್ಕ ಕಲ್ಪಿಸುವ ಸೇತುವೆ ಮುಳಗಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ದಿನ ದಿನಕ್ಕೆ ಜಲಾಶಯ ಒಳಹರಿವಿನ ಪ್ರಮಾಣ ಹೆಚ್ಚಳವಾಗುವುದ ಜತೆ ಕೃಷ್ಣ ನದಿ ಪಾತ್ರದಲ್ಲಿ ಪ್ರವಾಹ ಭೀತಿ ವಿಸ್ತರಗೊಳುತ್ತಿದೆ.Conclusion:ಇನ್ನು ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡು ಹೈ ಅಲರ್ಟ್ ಘೋಷಣೆ ಮಾಡಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.