ETV Bharat / state

ನೆರೆ ಹಾನಿ ಕುರಿತು ಜಿಲ್ಲಾಡಳಿತದಿಂದ ಅಗತ್ಯ ಮಾಹಿತಿ ಪಡೆಯಲಾಗಿದೆ: ಸುಬೋಧ್ ಯಾದವ್

ರಾಯಚೂರು ಜಿಲ್ಲೆಯಲ್ಲಿನ ನೆರೆ ಹಾಗೂ ಬರದಿಂದ ರೈತರು ಹಾಗೂ ಜನರಿಗೆ ಉಂಟಾದ ಸಮಸ್ಯೆ ಕುರಿತು ಚರ್ಚೆ ಮಾಡಲಾಗಿದೆ ಎಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಮಂಡಳಿಯ ಆಯುಕ್ತ ಸುಬೋಧ್​​ ಯಾದವ್ ತಿಳಿಸಿದರು.

ಸುಬೋಧ್ ಯಾದವ್
author img

By

Published : Aug 28, 2019, 7:47 PM IST

ರಾಯಚೂರು: ಜಿಲ್ಲೆಯಲ್ಲಿ ಉಂಟಾದ ನೆರೆ ಹಾವಳಿಯಿಂದ 300 ಕೋಟಿಗೂ ಹೆಚ್ಚು ಹಾನಿಯಾಗಿದ್ದು, ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕುರಿತು ಹೈದರಾಬಾದ್ ಕರ್ನಾಟಕ ಪ್ರದೇಶ ಮಂಡಳಿಯಿಂದ ಸಹಕಾರ ನೀಡಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಮಂಡಳಿಯ ಆಯುಕ್ತ ಸುಬೋಧ್ ಯಾದವ್ ತಿಳಿಸಿದರು.

ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಮಂಡಳಿಯ ಆಯುಕ್ತ ಸುಬೋಧ್ ಯಾದವ್

ಜಿಲ್ಲಾಡಳಿತದ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯ ನಂತರ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿನ ನೆರೆ ಹಾಗೂ ಬರದಿಂದ ರೈತರಿಗೆ ಹಾಗೂ ಜನರಿಗೆ ಉಂಟಾದ ಸಮಸ್ಯೆ ಕುರಿತು ಚರ್ಚೆ ಮಾಡಲಾಗಿದೆ. ಬರ ಹಾಗೂ ನೆರೆ ಹಾನಿಯ ಕುರಿತು ಜಿಲ್ಲಾಡಳಿತದಿಂದ ಅಗತ್ಯ ಮಾಹಿತಿ ಪಡೆಯಲಾಗಿದೆ ಎಂದರು.

ಕ್ರೀಡಾಂಗಣ ಕಾಮಗಾರಿಯ ಕುರಿತು ಸಮಗ್ರವಾಗಿ ಚರ್ಚಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ಸಭೆ ಮಾಡಲು ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಚುರುಕುಗೊಳಿಸಿ ಕ್ರೀಡಾಪಟುಗಳಿಗೆ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ರಾಯಚೂರಿನಲ್ಲಿ ಉಂಟಾದ ನೆರೆಹಾವಳಿಯ ಕುರಿತು ಜಿಲ್ಲಾಡಳಿತ ಸಿದ್ದಪಡಿಸಿದ್ದು 300 ಕೋಟಿಗೂ ಹೆಚ್ಚು ಹಾನಿಯಾಗಿದೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ, ಈ ಕುರಿತು ಹೈದರಾಬಾದ್-ಕರ್ನಾಟಕ ಪ್ರದೇಶ ಮಂಡಳಿಯಿಂದ ಸಹಕಾರ ನೀಡಲಾಗುವುದು ಎಂದು ಹೈದರಾಬಾದ್ ಕರ್ನಾಟಕ ಪ್ರಾದೇಶಿಕ ಮಂಡಳಿಯ ಆಯುಕ್ತ ಸುಬೋಧ್ ಯಾದವ್ ತಿಳಿಸಿದರು.
ಅವರಿಂದು ಜಿಲ್ಲಾಡಳಿತದ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯ ನಂತರ ಟಿವಿ ಭಾರತದೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿನ ನೆರೆ ಹಾಗೂ ಬರ ದಿಂದ ರೈತರಿಗೆ ಹಾಗೂ ಜನರಿಗೆ ಉಂಟಾದ ಸಮಸ್ಯೆ ಕುರಿತು ಚರ್ಚೆ ಮಾಡಲಾಗಿದೆ. ಬರ ಹಾಗೂ ನೆರೆ ಹಾನಿಯ ಕುರಿತು ಜಿಲ್ಲಾಡಳಿತದಿಂದ ಅಗತ್ಯ ಮಾಹಿತಿ ಪಡೆಯಲಾಗಿದೆ ಎಂದರು.
ಅಲ್ಲದೇ ನಗರದ ಜಿಲ್ಲಾ ಕ್ರೀಡಾಂಗಣದ ಕಾಮಗಾರಿ ವಿಳಂಬದ ಕುರಿತು ಪ್ರತಿಕ್ರಿಯಿಸಿದ ಅವರು, ಕ್ರೀಡಾಂಗಣದ ಸಿಂಡರ್ ಟ್ರ್ಯಾಕ್ ಹಾಗೂ ಫೆವಿಲಿಯನ್ ಕಾಮಗಾರಿ ಅವೈಜ್ಞಾನಿಕ ವಾದ ಬಗ್ಗೆ ಪರಿಶೀಲನೆ ನಡೆಸಿದ್ದೇನೆ ಸರಿಪಡಿಸಲು ಹಾಗೂ ಅಗತ್ಯ ಕ್ರಮದ ಬಗ್ಗೆ ಗುತ್ತಿಗೆದಾರರಿಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಕ್ರೀಡಾಂಗಣ ಕಾಮಗಾರಿಯ ಕುರಿತು ಸಮಗ್ರವಾಗಿ ಚರ್ಚಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ಸಭೆ ಮಾಡಲು ಸೂಚಿಸಿದ್ದು ಮುಂದಿನ ದಿನಗಳಲ್ಲಿ ಕಾಮಗಾರಿ ಚುರುಕುಗೊಳಿಸಿ ಕ್ರೀಡಾಪಟುಗಳಿಗೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.