ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಶ್ರೀಪುರ ಜಂಕ್ಷನ್ ಬಳಿ ಆಂಜನೇಯ ದೇವಾಲಯದ ಮುಂದೆ ಬೆಟ್ಟಿಂಗ್ನಲ್ಲಿ ತೊಡಗಿದ್ದ ಸಾಬಣ್ಣ ಶಿವಣ್ಣ ಎಂಬಾತನನ್ನು ಬಂಧಿಸಿ, ಪೊಲೀಸರು 18 ಸಾವಿರ ನಗದು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಸಿಂಧನೂರು ತಾಲೂಕಿನ ಆರ್.ಹೆಚ್.ಕ್ಯಾಂಪ್- 2ರಲ್ಲಿ ದಾಳಿ ನಡೆಸಿ ಶಿವುಮಂಡಲ ಎಂಬಾತನನ್ನು ಬಂಧಿಸಿ 3,150 ರೂ. ನಗದು, ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.
ನಿನ್ನೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವೆ ನಡೆಯುತ್ತಿದ್ದ ಪಂದ್ಯಾವಳಿ ವೇಳೆ ಇಬ್ಬರು ಆರೋಪಿಗಳು ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿದ್ದ ಖಚಿತ ಮಾಹಿತಿ ಮೇರೆಗೆ ಸಿಂಧನೂರು ಗ್ರಾಮೀಣ ಠಾಣೆ ಪಿಎಸ್‌ಐ ಜಿ.ಎಸ್.ರಾಘವೇಂದ್ರ ನೇತೃತ್ವದಲ್ಲಿ ಎರಡು ಕಡೆ ದಾಳಿ ನಡೆಸಿ, ಆರೋಪಿಗಳನ್ನ ಸೆರೆ ಹಿಡಿಯುವಲ್ಲಿ ಯಶ್ವಸಿಯಾಗಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಐಪಿಎಲ್ ಬೆಟ್ಟಿಂಗ್: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಬಂಧನ - ರಾಯಚೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ
ಐಪಿಎಲ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಸೆರೆ ಹಿಡಿಯುವಲ್ಲಿ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಯಶ್ವಸಿಯಾಗಿದ್ದಾರೆ.
![ಐಪಿಎಲ್ ಬೆಟ್ಟಿಂಗ್: ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಬಂಧನ IPL betting two people arrested in Raichur](https://etvbharatimages.akamaized.net/etvbharat/prod-images/768-512-9066372-813-9066372-1601960529994.jpg?imwidth=3840)