ಲಿಂಗಸುಗೂರು: ಪೊಲೀಸ್ ಅಧಿಕಾರಿಯೊಬ್ಬರು ಇಟ್ಟಂಗಿ ಸಾಗಣೆ ಟ್ರ್ಯಾಕ್ಟರ್ ಪಲ್ಟಿ ಹೊಡೆದು ತೀವ್ರವಾಗಿ ಗಾಯಗೊಂಡ ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಯರಡೋಣ ಕ್ರಾಸ್ನಲ್ಲಿ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ ಹೊಡೆದಾಗ ಅದರಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ಗಂಗಾವತಿ ತಾಲೂಕು ವೆಂಕಟಗಿರಿ ಗ್ರಾಮದ ರಮೇಶ ಮತ್ತು ಹನುಮೇಶ ಎಂದು ಗುರುತಿಸಲಾಗಿದೆ. ಅದೇ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಸಿಪಿಐ ಮಹಾಂತೇಶ ಸಜ್ಜನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.