ರಾಯಚೂರು : ಬಿಜೆಪಿಯವರು ಜೈಲಿನಲ್ಲಿ ಕುಳಿತು ಸರ್ಕಾರ ನಡೆಸಿದರು. ನಾವು ಜನರ ಮಧ್ಯೆ ಹೋಗಿ ಅವರ ಸಮಸ್ಯೆ ಕೇಳಿ ಸರ್ಕಾರ ನಡೆಸುತ್ತಿದ್ದೇವೆ ಎಂದು ಸಂಸದೀಯ ಕಾರ್ಯದರ್ಶಿ ಐವಾನ್ ಡಿಸೋಜಾ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂ ಗ್ರಾಮ ವಾಸ್ತವ್ಯ ಟೀಕಿಸುವ ಬಿಜೆಪಿ ನಾಯಕರು ಅಧಿಕಾರದಲ್ಲಿದ್ದಾಗ ಜನರ ಹತ್ತಿರ ಹೋಗಿದ್ದಾರಾ. ನಾಲ್ಕು ಗೋಡೆ ಮಧ್ಯೆ ಇಲ್ಲವೆ ಜೈಲಿನಲ್ಲಿ ಕುಳಿತು ಸರ್ಕಾರ ನಡೆಸಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಬಿಜೆಪಿ ನಿರಂತರ ಮಾಡುತ್ತಾ ಬರುತ್ತಿದೆ. ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಗುಡಿಗಿದ್ರು.
ಮೈತ್ರಿ ಸರ್ಕಾರ ಸ್ಥಿರವಾಗಿರುತ್ತದೆ. ಆನಂದ ಸಿಂಗ್ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ವಾಪಸ್ ಪಡೆಯುವ ವಿಶ್ವಾಸವಿದೆ ಎಂದರು.